ಕರೆನ್ಸಿ ವಿನಿಮಯ ಮಾರುಕಟ್ಟೆಯಲ್ಲಿ ರೂಪಾಯಿ ಮೌಲ್ಯದ ದಾಖಲೆ ಕುಸಿತ ; ತಜ್ಞರು ಹೇಳುವುದೇನು?

ಭಾರತದ ಕರೆನ್ಸಿ ವಿನಿಮಯ ಮಾರುಕಟ್ಟೆಯಲ್ಲಿ ರೂಪಾಯಿ ಮೌಲ್ಯ ಡಾಲರ್ ನ ಹೋಲಿಕೆಯಲ್ಲಿ ಈ ಹಿಂದೆಂದಿಗಿಂತ ದಾಖಲೆ ಮಟ್ಟದಲ್ಲಿ ಕುಸಿತ ಕಂಡಿದೆ.

ರೂಪಾಯಿ ಮೌಲ್ಯ 23 ಪೈಸೆ ಇಳಿಕೆಯಾಗಿದ್ದು, ಪ್ರತೀ ಡಾಲರ್ ಮೌಲ್ಯವು ಇದೇ ಮೊದಲ ಬಾರಿಗೆ ₹86.27ಕ್ಕೆ ಮುಟ್ಟಿದೆ.

ದೇಶದ ಈಕ್ವಿಟಿ ಮಾರುಕಟ್ಟೆಯಲ್ಲಿ ವಿದೇಶಿ ಬಂಡವಾಳದ ಹೊರಹರಿವು ಮುಂದುವರಿದಿದೆ. ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆ ಏರಿಕೆಯಾಗುತ್ತಿದೆ. ಅಮೆರಿಕದ ಬಾಂಡ್‌ಗಳ ಗಳಿಕೆಯಲ್ಲಿ ಹೆಚ್ಚಳವಾಗಿದೆ. ದೇಶೀಯ ಸೂಚ್ಯಂಕಗಳ ಇಳಿಕೆಯಿಂದಾಗಿ ರೂಪಾಯಿ ಮೇಲೆ ಒತ್ತಡ ಸೃಷ್ಟಿಯಾಗಿದೆ.

ಇದರಿಂದ ರೂಪಾಯಿ ಮೌಲ್ಯ ಕುಸಿತದ ಹಾದಿ ಹಿಡಿದಿದೆ ಎಂದು ಮಾರುಕಟ್ಟೆ ತಜ್ಞರು ಹೇಳಿದ್ದಾರೆ.

Related Articles

ಇತ್ತೀಚಿನ ಸುದ್ದಿಗಳು