Home ಬೆಂಗಳೂರು ಸರ್ಕಾರಿ ಆಸ್ಪತ್ರೆಗಳ ವೈದ್ಯರ ಶೀಘ್ರ ನೇಮಕಾತಿ – ಸಚಿವ ಯು.ಟಿ. ಖಾದರ್

ಸರ್ಕಾರಿ ಆಸ್ಪತ್ರೆಗಳ ವೈದ್ಯರ ಶೀಘ್ರ ನೇಮಕಾತಿ – ಸಚಿವ ಯು.ಟಿ. ಖಾದರ್

ಬೆಂಗಳೂರು : ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ದೀರ್ಘಕಾಲದಿಂದ ವೈದ್ಯರು ಮತ್ತು ಸಿಬ್ಬಂದಿಯ ಕೊರತೆ ಎದುರಾಗಿತ್ತು. ಅದನ್ನ ನೀಗಿಸಲು ಈಗ ಆರೋಗ್ಯ ಇಲಾಖೆ ಅತ್ಯಂತ ಮಹತ್ವದ ತೀರ್ಮಾನ ಕೈಗೊಂಡಿದೆ. ಆರೋಗ್ಯ ಸಚಿವ ಯು.ಟಿ. ಖಾದರ್ (UT Khader) ಅವರ ನೇತೃತ್ವದಲ್ಲಿ ನಡೆದ ಉನ್ನತ ಮಟ್ಟದ ಸಭೆಯಲ್ಲಿ ಈ ಕುರಿತು ಬಹಳ ಮುಖ್ಯವಾದ (Good News) ನಿರ್ಧಾರಗಳನ್ನ ಮಾಡಲಾಗಿದ್ದು, ಇದರಿಂದ ಆರೋಗ್ಯ ಕ್ಷೇತ್ರದಲ್ಲಿ ಅಭಿವೃದ್ಧಿ ಆಗುವ ನಿರೀಕ್ಷೆ ಹೆಚ್ಚಾಗಿದೆ.

200 ವೈದ್ಯರ ಖಾಯಂ ನೇಮಕಾತಿ
ರಾಜ್ಯದ ವಿವಿಧ ಜಿಲ್ಲೆಗಳ ಸರ್ಕಾರಿ ಆಸ್ಪತ್ರೆಗಳಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡುವ ಮೊದಲ ಹಂತವಾಗಿ 200 ವೈದ್ಯರನ್ನು ನೇರ ನೇಮಕಾತಿ ಮಾಡಿಕೊಳ್ಳಲು ಸಚಿವರು ಸೂಚನೆ ನೀಡಿದ್ದಾರೆ. ಮುಖ್ಯವಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ (KEA) ಮೂಲಕ ಈ ಪ್ರಕ್ರಿಯೆ ನಡೆಸಲಾಗುತ್ತದೆ. ಅಲ್ಲದೇ, ಈ ಆಯ್ಕೆಗೆ ಸಂಬಂಧಪಟ್ಟ ಪರೀಕ್ಷೆ ಮುಗಿದ ಕೇವಲ ಒಂದು ವಾರದ ಒಳಗಾಗಿ ಆಯ್ಕೆಯಾದ ಅಭ್ಯರ್ಥಿಗಳಿಗೆ ನೇಮಕಾತಿ ಪತ್ರ ನೀಡಲು ಇಲಾಖೆ ನಿರ್ಧಾರ ಮಾಡಿದೆ. ಈ ನೇಮಕಾತಿಗೆ ಆರ್ಥಿಕ ಇಲಾಖೆಯಿಂದ ಕೂಡ ಈಗಾಗಲೇ ಅಧಿಕೃತ ಒಪ್ಪಿಗೆ ಸಿಕ್ಕಿದೆ.

1,200 ಪ್ಯಾರಾ ಮೆಡಿಕಲ್ ಸಿಬ್ಬಂದಿ ಭರ್ತಿ
ಇನ್ನು ಸರ್ಕಾರಿ ಆಸ್ಪತ್ರೆಗಳಲ್ಲಿ ಕಡಿಮೆ ಎಂದರೂ ಸಹ ಒಟ್ಟು 1,280 ವೈದ್ಯರ ಕೊರತೆ ಇದೆ ಎನ್ನಲಾಗುತ್ತಿದೆ. ಇದರ ಜೊತೆಗೆ ಪ್ಯಾರಾ ಮೆಡಿಕಲ್‌ ಸಿಬ್ಬಂದಿಗಳ ಅಗತ್ಯ ಸಹ ಅನೇಕ ಸರ್ಕಾರಿ ಆಸ್ಪತ್ರೆಗಳಿಗೆ ಇದೆ. ಹಾಗಾಗಿ ಎಲ್ಲಾ ಸರ್ಕಾರಿ ಆಸ್ಪತ್ರೆಗಳ ಸುಗಮ ನಿರ್ವಹಣೆಗೆ ಅಗತ್ಯವಿರುವ ಸಿಬ್ಬಂದಿಯನ್ನು ನೇಮಕ ಮಾಡಿಕೊಳ್ಳಲು ಇಲಾಖೆ ನಿರ್ಧಾರ ಮಾಡಿದೆ. ಹಾಗಾಗಿ ಇಲಾಖೆಯು 400 ನರ್ಸ್‌ಗಳು, 400 ಫಾರ್ಮಸಿಸ್ಟ್‌ಗಳು ಹಾಗೂ 400 ಲ್ಯಾಬ್ ಟೆಕ್ನಿಷಿಯನ್ ಹುದ್ದೆಗಳನ್ನು ಭರ್ತಿ ಮಾಡಲು ಸಹ ಸೂಚನೆ ನೀಡಲಾಗಿದೆ. ಅಲ್ಲದೇ, ಇದನ್ನ ಸಹ ಕೆಇಎ (KEA) ಮೂಲಕವೇ ಖಾಯಂ ಆಗಿ ಭರ್ತಿ ಮಾಡಿಕೊಳ್ಳಲು ಸಭೆಯಲ್ಲಿ ಸಚಿವರು ಒಪ್ಪಿಗೆ ಸೂಚಿಸಿದ್ದಾರೆ ಎನ್ನಲಾಗಿದೆ.

ರಾಜ್ಯದಲ್ಲಿ ಸಾವಿರಕ್ಕೂ ಹೆಚ್ಚು ವೈದ್ಯರ ಕೊರತೆ ಇದೆ. ಹಾಗಾಗಿ 200 ವೈದ್ಯರ ನೇರ ಖಾಯಂ ನೇಮಕದಿಂದ ಸಮಸ್ಯೆ ಕಡಿಮೆ ಆಗುವುದಿಲ್ಲ. ಹಾಗಾಗಿ ತುರ್ತು ಅಗತ್ಯತೆಗಳನ್ನು ಪೂರೈಸಲು ತಕ್ಷಣವೇ ಜಾರಿಗೆ ಬರುವಂತೆ ಗುತ್ತಿಗೆ ಆಧಾರದ ಮೇಲೆ 1,000 ವೈದ್ಯರನ್ನು ನೇಮಕ ಮಾಡಿಕೊಳ್ಳಲು ಸಹ ನಿರ್ಧರಿಸಲಾಗಿದೆ. ಈ ಹುದ್ದೆಗಳಿಗೆ ಸಹ ಇಲಾಖೆಯಿಂದ ಯಾವುದೇ ಲಿಖಿತ ಪರೀಕ್ಷೆ ಮಾಡಲಾಗುವುದಿಲ್ಲ, ಬದಲಾಗಿ ನೇರ ಸಂದರ್ಶನದ ಮೂಲಕ ಈ ಗುತ್ತಿಗೆ ಆಧಾರದ ವೈದ್ಯರ ಆಯ್ಕೆ ನಡೆಯಲಿದೆ. ಆಸಕ್ತ ವೈದ್ಯರು ಆಯಾ ಜಿಲ್ಲೆಯ ಜಿಲ್ಲಾ ಆರೋಗ್ಯ ಅಧಿಕಾರಿಗಳಿಗೆ (DHO) ನೇರವಾಗಿ ಅರ್ಜಿ ಸಲ್ಲಿಸಿ, ಸಂದರ್ಶನದಲ್ಲಿ ಭಾಗವಹಿಸಲು ಅವಕಾಶ ನೀಡಲಾಗಿದೆ.

ಗುತ್ತಿಗೆ ಆಧಾರದ ಮೇಲೆ ಕೆಲಸಕ್ಕೆ ಸೇರುವವರಿಗೆ ಸರ್ಕಾರೊಂದು ಅದ್ಭುತವಾದ ಅವಕಾಶವನ್ನ ನೀಡುತ್ತಿದೆ. ಯಾವೆಲ್ಲಾ ವೈದ್ಯರು ಗುತ್ತಿಗೆ ಆಧಾರದಲ್ಲಿ ನೇಮಕವಾಗಿರುತ್ತಾರೋ, ಅವರು ಆ ಅವಧಿಯಲ್ಲಿ ತೋರಿಸುವ ಸೇವಾ ಸಾಧನೆ ಮತ್ತು ಕರ್ತವ್ಯ ನಿಷ್ಠೆಯನ್ನು ಪರಿಗಣಿಸಿ, ಮುಂದಿನ ದಿನಗಳಲ್ಲಿ ಅವರನ್ನು ಖಾಯಂಗೊಳಿಸಲಾಗುತ್ತದೆ ಎಂದು ಇಲಾಖೆ ತಿಳಿಸಿದೆ. ಈ ವೈದ್ಯರ 5 ವರ್ಷಗಳ ಸೇವೆಯನ್ನ ಪರಿಶೀಲಿಸಿ ನಂತರ ಅವರನ್ನ ಖಾಯಂ ಮಾಡುವ ನಿರ್ಧಾರ ಮಾಡಲಾಗುತ್ತದೆ.

You cannot copy content of this page

Exit mobile version