ಗ್ರಾಮ ಒನ್ ಸೇವಾ ಕೇಂದ್ರಗಳಿಗೆ ಫ್ರಾಂಚೈಸಿಗಳ ನೇಮಕ: ಅರ್ಜಿ ಆಹ್ವಾನ

ಸರ್ಕಾರದ ಇಡಿಸಿಎಸ್ ನಿರ್ದೇಶನಾಲಯದ ಇ-ಆಡಳಿತ ಇಲಾಖೆಯ ನಿರ್ದೇಶನದಂತೆ ಜಿಲ್ಲೆಯಲ್ಲಿ ಖಾಲಿ ಇರುವ ಗ್ರಾಮ ಒನ್ ಸೇವಾ ಕೇಂದ್ರಗಳಿಗೆ ಫ್ರಾಂಚೈಸಿಗಳನ್ನು ನೇಮಕ ಮಾಡಲು ಆಸಕ್ತ ಅರ್ಹ ಆಭ್ಯರ್ಥಿಗಳಿಂದ ಆನ್‌ಲೈನ್ ಮೂಲಕ ಅರ್ಜಿ ಅಹ್ವಾನಿಸಲಾಗಿದೆ.

ಜಿಲ್ಲೆಯ 02 ಗ್ರಾಮ – ಒನ್ ಕೇಂದ್ರಗಳಿಗೆ ಫ್ರಾಂಚೈಸಿಯನ್ನು ನೇಮಕ ಮಾಡಲು ಉದ್ದೇಶಿಸಲಾಗಿದೆ. ಬಳ್ಳಾರಿ ತಾಲ್ಲೂಕಿನ ಶಿಡಗಿನಮೊಳ ಮತ್ತು ಸಂಡೂರು ತಾಲ್ಲೂಕಿನ ಭುಜಂಗನಗರ ಗ್ರಾಮ ಪಂಚಾಯತಿ.

ಖಾಲಿಯಿರುವ ಗ್ರಾಮ ಒನ್ ಕೇಂದ್ರಗಳ ವಿವರ ಮತ್ತು ಅರ್ಜಿ ಸಲ್ಲಿಸಲು https://kal-mys.gramaone.karnataka.gov.in/ ಗೆ ಭೇಟಿ ನೀಡಬಹುದು. ನಾಗರೀಕ ಸೇವಾ ಕೇಂದ್ರ ಗ್ರಾಮ ಒನ್ ಫ್ರಾಂಚೈಸಿಯನ್ನು ಬಯಸುವವರು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.

ಅರ್ಜಿ ಸಲ್ಲಿಸಲು ಏಪ್ರಿಲ್ 15 ಕೊನೆಯ ದಿನ ಆಗಿರುತ್ತದೆ ಎಂದು ಅಪರ ಜಿಲ್ಲಾಧಿಕಾರಿ ಮಹಮ್ಮದ್ ಝುಬೇರ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Related Articles

ಇತ್ತೀಚಿನ ಸುದ್ದಿಗಳು