Home ಬ್ರೇಕಿಂಗ್ ಸುದ್ದಿ ಶಾಸಕ ಮುನಿರತ್ನಗೆ ಮತ್ತೆ ಸಂಕಷ್ಟ : ಆರೋಪದಲ್ಲಿರುವ ಎಲ್ಲವೂ ನಿಜ ಎಂದು ಚಾರ್ಜ್‌ಶೀಟ್ ನಲ್ಲಿ ಉಲ್ಲೇಖ

ಶಾಸಕ ಮುನಿರತ್ನಗೆ ಮತ್ತೆ ಸಂಕಷ್ಟ : ಆರೋಪದಲ್ಲಿರುವ ಎಲ್ಲವೂ ನಿಜ ಎಂದು ಚಾರ್ಜ್‌ಶೀಟ್ ನಲ್ಲಿ ಉಲ್ಲೇಖ

0

ಶಾಸಕ ಮುನಿರತ್ನ ಮೇಲಿನ ಆರೋಪದಲ್ಲಿ ಹೆಚ್‌ಐವಿ ಪೀಡಿತರ ಬಳಸಿ ವಿರೋಧಿಗಳಿಗೆ ಏಡ್ಸ್ ಹರಡಲು ಯತ್ನಿಸಿದ್ದು ನಿಜ ಹಾಗೂ ನಿರಂತರ ಅತ್ಯಾಚಾರ, ಅಪಾಯಕಾರಿ ರೋಗ ಹರಡುವಿಕೆ ನಡೆಸಿದ್ದು ನಿಜ ಎಂಬ ಬಗ್ಗೆ ಎಸ್ಐಟಿ ಸಲ್ಲಿಸಿದ ಚಾರ್ಜ್‌ಶೀಟ್ ನಲ್ಲಿ ಉಲ್ಲೇಖಿಸಿದೆ.

ಎಸ್‌ಐಟಿ, ಜನಪ್ರತಿನಿಧಿಗಳ ನ್ಯಾಯಾಲಕ್ಕೆ ಚಾರ್ಜ್ ಶೀಟ್ ನಲ್ಲಿ ಈ ಎಲ್ಲಾ ಅಂಶಗಳನ್ನು ಉಲ್ಲೇಖಿಸಿ ಹಲವು ಸೆಕ್ಷನ್ ಅಡಿ ಕೇಸ್ ದಾಖಲಿಸಿದೆ. ಹೀಗಾಗಿ ಶಾಸಕ ಮುನಿರತ್ನಗೆ ಮತ್ತೊಂದು ಸಂಕಷ್ಟ ಎದುರಾದಂತೆ ಆಗಿದೆ.

ಇನ್ನೂ ಐಪಿಸಿ 354ಎ ಲೈಂಕಿಕ ಕಿರುಕುಳ, 354ಸಿ ಅನುಮತಿ ಇಲ್ಲದೇ ಮಹಿಳೆಯ ಅಶ್ಲೀಲ ದೃಶ್ಯಾವಳಿ ಚಿತ್ರೀಕರಣ, 376(2) ಎನ್ ನಿರಂತರ ಅತ್ಯಾಚಾರ, 308 ಸಂತ್ರಸ್ತೆಯ ಕೊಲ್ಲುವ ಉದ್ದೇಶ, 120ಬಿ ಅಪರಾಧಿಕ ಸಂಚು, 504 ಉದ್ದೇಶ ಪೂರ್ವಕ ಅವಮಾನ, 506 ಜೀವ ಬೆದರಿಕೆ, 270 ಅಪಾಯಕಾರಿ ರೋಗ ಹರಡುವಿಕೆ ಹಾಗೂ ಮಾಹಿತಿ ತಂತ್ರಜ್ಞಾನ ಕಾಯ್ದೆ 2000 ಸೇರಿದಂತೆ ಇತರೆ ಕಾಯ್ದೆಗಳ ಅಡಿಯಲ್ಲಿ ಆರೋಪ ಪಟ್ಟಿಯನ್ನು ಸಲ್ಲಿಸಿದೆ.

ಬಿಜೆಪಿ ಕಾರ್ಯಕರ್ತೆಯೊಬ್ಬರು ಕಳೆದ ಸೆಪ್ಟೆಂಬರ್ ನಲ್ಲಿ ನೀಡಿದ ದೂರಿನ ಹಿನ್ನೆಲೆಯಲ್ಲಿ ತನ್ನ ಮೇಲೆ ಶಾಸಕ ಮುನಿರತ್ನ, ಸಹಚರರು ಅತ್ಯಾಚಾರ ಮಾಡಿದ್ದಾರೆ ಎಂಬುದಾಗಿ ಆರೋಪಿಸಿದ್ದರು. ಇದರ ಬೆನ್ನಲ್ಲೇ ರಾಮನಗರ ಪೊಲೀಸರು ಮುನಿರತ್ನ ಅವರನ್ನು ಕೋಲಾರದ ಬಳಿ ಬಂಧಿಸಿದ್ದರು. ಈ ಪ್ರಕರಣವನ್ನು ರಾಜ್ಯ ಸರ್ಕಾರ ಎಸ್‌ಐಟಿ ತನಿಖೆಗೆ ವಹಿಸಿತ್ತು.

You cannot copy content of this page

Exit mobile version