ವಿಶ್ವ ಆರೋಗ್ಯ ಸಂಸ್ಥೆಯ ಅಡಿಯಲ್ಲಿ ಬರುವ ಕ್ಯಾನ್ಸರ್ ಸಂಶೋಧನಾ ಸಂಸ್ಥೆ, ಅಡಿಕೆಯ ಕುರಿತು ಮತ್ತೆ ಮಹತ್ವದ ವರದಿ ಸಲ್ಲಿಸಲಾಗಿದ್ದು, ಅಡಕೆ ಕ್ಯಾನ್ಸರ್ ಕಾರಕ ಎಂದು ವರದಿಯಲ್ಲಿ ಉಲ್ಲೇಖಿಸಲಾಗಿದೆ. ಈ ವರದಿ ಹೊರಬಂದ ಹಿನ್ನೆಲೆಯಲ್ಲಿ ಅಡಿಕೆ ಮೇಲೆ ಮತ್ತೆ ಕಪ್ಪು ಛಾಯೆ ಮೂಡಿದ್ದು ಬೆಳೆಗಾರರು ಆತಂಕ ಪಡುವಂತಾಗಿದೆ.
ವಿಶ್ವ ಆರೋಗ್ಯ ಸಂಸ್ಥೆಯ (WHO) ಅಂಗಸಂಸ್ಥೆ ಕ್ಯಾನ್ಸರ್ ಸಂಶೋಧನಾ ಸಂಸ್ಥೆ ಅಡಕೆ ಬಳಕೆಯನ್ನು ನಿಯಂತ್ರಣ ಮಾಡಿದಲ್ಲಿ ವಿಶ್ವದಲ್ಲಿ ಬಾಯಿ ಕ್ಯಾನ್ಸರ್ ಪ್ರಮಾಣವನ್ನು ಬಹುತೇಕ ಕಡಿಮೆ ಮಾಡಬಹುದಾಗಿದೆ ಎಂದು ವರದಿ ಸಲ್ಲಿಸಿದೆ. ಇದು ಅಡಕೆ ಬಳಕೆ ಮೇಲೆ ನಿಯಂತ್ರಣ ಹೇರುವ ಆತಂಕ ಮೂಡಿಸಿದೆ.
ಕರ್ನಾಟಕ ರಾಜ್ಯದ ಪ್ರಮುಖ ವಾಣಿಜ್ಯ ಬೆಳೆಯಾಗಿರುವ ಅಡಿಕೆಗೆ ಪ್ರತೀ ವರ್ಷ ಒಂದಿಲ್ಲೊಂದು ಕಂಟಕ ತಲೆದೋರುತ್ತಿದೆ. ಈ ಬಾರಿ ನೇರವಾಗಿ ವಿಶ್ವ ಆರೋಗ್ಯ ಸಂಸ್ಥೆಯ (WHO) ಕಡೆಯಿಂದಲೇ ಬಂದ ವರದಿ ಹಿನ್ನೆಲೆಯಲ್ಲಿ ತಂಬಾಕು ಮಾದರಿಯಲ್ಲಿ ಅಡಿಕೆ ನಿಯಂತ್ರಣಕ್ಕೆ ಕಾರಣವಾಗುವ ಆತಂಕ ಅಡಿಕೆ ಬೆಳೆಗಾರರಲ್ಲಿ ಮೂಡಿದೆ. ಇದರಿಂದ ಬೆಳೆಗಾರರು ತೀವ್ರ ಆತಂಕ ಪಡುವಂತಾಗಿದೆ.
ಅಡಕೆ ಕ್ಯಾನ್ಸರ್ ಕಾರಕ ಎಂಬುದರ ಬಗ್ಗೆ ಸುಪ್ರೀಂ ಕೋರ್ಟ್ ನಲ್ಲಿ ಈಗಾಗಲೇ ಕಾನೂನು ಸಮರ ನಡೆಯುತ್ತಿದ್ದು, ಅಡಕೆಯು ಆರೋಗ್ಯದಾಯಕ ಎಂದು ಸಾಬೀತುಪಡಿಸಲಾಗಿದೆ. ಇದರ ನಡುವೆ ಇಂತಹುದೊಂದು ವರದಿ ಸಲ್ಲಿಕೆಯಾಗಿದೆ.
ವಿಶ್ವ ಆರೋಗ್ಯ ಸಂಸ್ಥೆಯ ಸಂಘ ಸಂಸ್ಥೆ ಇಂಟರ್ನ್ಯಾಷನಲ್ ಏಜೆನ್ಸಿ ಫಾರ್ ರಿಸರ್ಚ್ ಅಂಡ್ ಕ್ಯಾನ್ಸರ್ 2024ರ ಅಕ್ಟೋಬರ್ 9ರಂದು ಬಿಡುಗಡೆ ಮಾಡಿದ ವರದಿಯಲ್ಲಿ ಅಡಿಕೆ ಕ್ಯಾನ್ಸರ್ ಕಾರಕ ಎಂದು ಹೇಳಲಾಗಿದೆ. ಈ ವರದಿ ದಿ ಲ್ಯಾನ್ಸೆಟ್ ಅಂಕಾಲಜಿ ಎಂಬ ಅಂತರಾಷ್ಟ್ರೀಯ ಜರ್ನಲ್ ನಲ್ಲಿ ಈ ವರದಿ ಪ್ರಕಟವಾಗಿದೆ.