ದೇಶದಲ್ಲಿ 20 ವರ್ಷಕ್ಕಿಂತ ಹಳೆಯದಾದ ವಾಹನಗಳ ನೋಂದಣಿ ನವೀಕರಣ ಶುಲ್ಕವನ್ನು ಹೆಚ್ಚಿಸುವುದಾಗಿ ಕೇಂದ್ರ ರಸ್ತೆ ಸಾರಿಗೆ ಇಲಾಖೆ ಶುಕ್ರವಾರ ಪ್ರಕಟಿಸಿದೆ. 20 ವರ್ಷಗಳ ನಂತರ ಹಳೆಯ ವಾಹನಗಳನ್ನು ಬಳಸದಂತೆ ಜನರನ್ನು ಪ್ರೋತ್ಸಾಹಿಸಲು ಈ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದೆ.
20 ವರ್ಷಕ್ಕಿಂತ ಮೇಲ್ಪಟ್ಟ ಲಘು ಮೋಟಾರು ವಾಹನಗಳ (ಎಲ್‌ಎಂವಿ) ನವೀಕರಣ ಶುಲ್ಕವನ್ನು ₹5 ಸಾವಿರದಿಂದ ₹10 ಸಾವಿರಕ್ಕೆ, 20 ವರ್ಷಕ್ಕಿಂತ ಮೇಲ್ಪಟ್ಟ ದ್ವಿಚಕ್ರ ವಾಹನಗಳ ನವೀಕರಣ ಶುಲ್ಕವನ್ನು ₹1 ಸಾವಿರದಿಂದ ₹2 ಸಾವಿರಕ್ಕೆ ಮತ್ತು ಮೂರು ಮತ್ತು ನಾಲ್ಕು ಚಕ್ರಗಳ ವಾಹನಗಳ ನವೀಕರಣ ಶುಲ್ಕವನ್ನು ₹3,500 ದಿಂದ ₹5 ಸಾವಿರಕ್ಕೆ ಹೆಚ್ಚಿಸಲಾಗಿದೆ ಎಂದು ತಿಳಿಸಿದೆ.