ಜಗನ್ನಾಥ ಸ್ವಾಮಿ ವಾಸಿಸುವ ಪವಿತ್ರ ಭೂಮಿ ಒಡಿಶಾಕ್ಕೆ ಭೇಟಿ ನೀಡುವ ಸಲುವಾಗಿ ಟ್ರಂಪ್‌ ನೀಡಿದ ಆಹ್ವಾನವನ್ನು ತಿರಸ್ಕರಿಸಿದೆ: ಮೋದಿ

ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ವಾಷಿಂಗ್ಟನ್‌ಗೆ ಭೇಟಿ ನೀಡುವಂತೆ ನೀಡಿದ್ದ ಆಹ್ವಾನವನ್ನು ತಿರಸ್ಕರಿಸಿರುವುದಾಗಿ ಪ್ರಧಾನಿ ನರೇಂದ್ರ ಮೋದಿ ಶುಕ್ರವಾರ ಬಹಿರಂಗಪಡಿಸಿದ್ದಾರೆ.

ಆ ಆಹ್ವಾನವನ್ನು ತಿರಸ್ಕರಿಸಿ ಜಗನ್ನಾಥ ಸ್ವಾಮಿ ವಾಸಿಸುವ ಪವಿತ್ರ ಭೂಮಿ ಒಡಿಶಾಗೆ ಬರಲು ನಿರ್ಧರಿಸಿದೆ ಎಂದು ಅವರು ಹೇಳಿದರು. ಒಡಿಶಾದಲ್ಲಿ ಮೊದಲ ಬಿಜೆಪಿ ಸರ್ಕಾರ ರಚನೆಯಾಗಿ ಒಂದು ವರ್ಷ ತುಂಬಿದ ಹಿನ್ನೆಲೆಯಲ್ಲಿ ಆಯೋಜಿಸಲಾಗಿದ್ದ ಸಾರ್ವಜನಿಕ ಸಭೆಯಲ್ಲಿ ಮೋದಿ ಮಾತನಾಡುತ್ತಿದ್ದರು.

ವಿಶ್ವ ಯೋಗ ದಿನಾಚರಣೆಯ ಅಂಗವಾಗಿ ಶನಿವಾರ ಆಂಧ್ರಪ್ರದೇಶದ ವಿಶಾಖಪಟ್ಟಣದಲ್ಲಿ ನಡೆಯಲಿರುವ ಯೋಗ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ ಭಾಗವಹಿಸಲಿದ್ದಾರೆ. ಈ ಸಂದರ್ಭದಲ್ಲಿ, ವಿಶಾಖಪಟ್ಟಣಂನ ಆರ್‌ಕೆ ಸಮುದ್ರ ತೀರದಿಂದ ಭೋಗಪುರಂವರೆಗಿನ 26 ಕಿ.ಮೀ ಉದ್ದದ ಕಾರಿಡಾರ್‌ನಲ್ಲಿ ಏಕಕಾಲದಲ್ಲಿ ಮೂರು ಲಕ್ಷ ಜನರು ಯೋಗ ಮಾಡಲು ವ್ಯವಸ್ಥೆ ಮಾಡಲಾಗಿದೆ.

Related Articles

ಇತ್ತೀಚಿನ ಸುದ್ದಿಗಳು