Home Uncategorized ‘ಮಹೇಶ್ ಜೋಶಿಯನ್ನು ಇಳಿಸಿ; ಕಸಾಪ ಉಳಿಸಿ’ ಜನಪರ ಸಂಘಟನೆಗಳ ಒತ್ತಾಯ

‘ಮಹೇಶ್ ಜೋಶಿಯನ್ನು ಇಳಿಸಿ; ಕಸಾಪ ಉಳಿಸಿ’ ಜನಪರ ಸಂಘಟನೆಗಳ ಒತ್ತಾಯ

ಹಾಸನ : ಕೇಂದ್ರ ಕನ್ನಡ ಸಾಹಿತ್ಯ ಪರಿಷತ್ತಿನ ರಾಜ್ಯ ಅಧ್ಯಕ್ಷರಾದ ಮಹೇಶ್ ಜೋಷಿಯವರ ಸರ್ವಾಧಿಕಾರಿ ಧೋರಣೆ ಮತ್ತು ಅಪ್ರಜಾಸತ್ತಾತ್ಮಕ ನಡವಳಿಕೆ ವಿರುದ್ಧ ಕನ್ನಡ ಸಾಹಿತ್ಯ ಪರಿಷತ್ತ್ ಪ್ರೇಮಿಗಳಿಂದ ಪ್ರತಿಭಟಿಸಿದಲ್ಲದೇ ಅಧ್ಯಕ್ಷ ಸ್ಥಾನದಿಂದ ವಜಾಗೊಳಿಸಿ ಸೂಕ್ತ ತನಿಖೆ ನಡೆಸುವಂತೆ ಆಗ್ರಹಿಸಿ ಅಪರ ಜಿಲ್ಲಾಧಿಕಾರಿ ಕೆ.ಟಿ. ಶಾಂತಲಾ ಅವರಿಗೆ ಮನವಿ ಸಲ್ಲಿಸಿದರು.

ಕನ್ನಡ ಸಾಹಿತ್ಯ ಪರಿಷತ್ತಿಗೆ ಪ್ರಸ್ತುತ ರಾಜ್ಯ ಅಧ್ಯಕ್ಷರಾಗಿರುವ ಮಹೇಶ್ ಜೋಶಿ ಅವರು ಕನ್ನಡ ಸಾಹಿತ್ಯ ಪರಿಷತ್ತಿನ ಘನತೆಗೆ ವಿರುದ್ಧವಾಗಿ ಅಧಿಕಾರ ನಡೆಸುತ್ತಿದ್ದಾರೆ. ಈ ಹಿಂದೆ ಅಧ್ಯಕ್ಷರಾಗಿ ಕನ್ನಡದ ಕೆಲಸವನ್ನು ಮಾಡಿದವರು ಅತ್ಯಂತ ಸರಳವಾಗಿ ಮತ್ತು ಪ್ರಾಮಾಣಿಕವಾಗಿ ಕೆಲಸ‌ ಮಾಡಿ ಕನ್ನಡವನ್ನು ಕಟ್ಟುವ ಕೆಲಸ ಮಾಡಿದ್ದರು. ಆದರೆ ಮಹೇಶ್ ಜೋಶಿಯವರು ಅನಗತ್ಯವಾಗಿ ಸರ್ಕಾರದ ರಾಜ್ಯ ಸಚಿವ ಸಂಪುಟ ದರ್ಜೆಯ‌ ಸ್ಥಾನವನ್ನು ಪಡೆದುಕೊಂಡು ಕನ್ನಡದ ಪರವಾಗಿ ಕೆಲಸ ಮಾಡದೆ ಕೇವಲ ಅಧಿಕಾರ ಚಲಾಯಿಸುವುದರಲ್ಲಿ ನಿರತರಾಗಿದ್ದಾರೆ. ಮಹೇಶ್ ಜೋಶಿಯವರು ಮೈತುಂಬಾ ಭ್ರಷ್ಟಾಚಾರದ ಕೆಸರನ್ನು ಮೆತ್ತಿಕೊಂಡಿದ್ದಾರೆ. ಇತ್ತೀಚೆಗ ನಡೆದ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಲೆಕ್ಕಪತ್ರವನ್ನು ಇದುವರೆಗೂ ನೀಡಿಲ್ಲ. ಅವರ ಅಧಿಕಾರ ದುರುಪಯೋಗ ಹಾಗೂ ದುರ್ವರ್ತನೆಯನ್ನು ಪ್ರಶ್ನಿಸಿದವರ ವಿರುದ್ಧ ನೋಟಿಸ್ ನೀಡುವುದು, ಕಸಾಪ ಆಜೀವ ಸದಸ್ಯತ್ವವನ್ನು ರದ್ದುಗೊಳಿಸುವುದು, ಚುನಾವಣೆಯ ಮೂಲಕ ಆಯ್ಕೆಗೊಂಡಿರುವ ಜಿಲ್ಲಾಧ್ಯಕ್ಷರುಗಳ ನಡುವೆ ಆರ್ಥಿಕ ತಾರತಮ್ಯ ಮಾಡುವುದು, ಆರ್ಥಿಕ ಅಶಿಸ್ತು, ಕನ್ನಡ ಸಾಹಿತ್ಯ ಪರಿಷತ್ತಿನ ಸಂವಿಧಾನಕ್ಕೆ ಅತ್ಯಂತ ಪ್ರಜಾಪ್ರಭುತ್ವ ವಿರೋಧಿ ತಿದ್ದುಪಡಿಗಳನ್ನು ತಂದು ಸಾಹಿತ್ಯ ಪರಿಷತ್ತಿನ ಪರಂಪರೆ ಮತ್ತು ಘನತೆಗೆ ಧಕ್ಕೆ ತರುವಂತಹ ದುರ್ವತ್ರನೆಗಳನ್ನು ತೋರುತ್ತಿರುವ ಸಮಸ್ತ ಕನ್ನಡಿಗರಿಗೆ ಆಘಾತ ತಂದಿದೆ ಎಂದು ಪ್ರತಿಭಟನಾಕಾರರು ಅಕ್ರೋಶ ವ್ಯಕ್ತಪಡಿಸಿದರು. ಈ ಸಂಧರ್ಭದಲ್ಲಿ ಪ್ರತಿಭಟನೆಯಲ್ಲಿ ಜನಪದ ವಿದ್ವಾಂಸ ಮೇಟಿಕರೆ ಹಿರಿಯಣ್ಣ, ಕೆ.ಪಿ.ಆರ್.ಎಸ್. ಹೆಚ್.ಆರ್. ನವೀನ್ ಕುಮಾರ್, ಹಿರಿಯ ಪತ್ರಕರ್ತರಾದ ಆರ್.ಪಿ ವೆಂಕಟೇಶ್ ಮೂರ್ತಿ, ಉದಯರವಿ, ಧರ್ಮೇಶ್, ಕರವೇ ಜಿಲ್ಲಾಧ್ಯಕ್ಷ ಸತೀಶ್ ಪಟೇಲ್, ಹರೀಶ್ ಕಟ್ಟೆಬೆಳಗುಲಿ, ಪಿ. ಶಾಡ್ರಾಕ್, ಟಿ.ಆರ್. ವಿಜಯಕುಮಾರ್, ಎಂ.ಜಿ. ಪೃಥ್ವಿ, ಅರವಿಂದ್, ಹಿರಿಯ ಸಾಹಿತಿ ಎನ್.ಎಲ್. ಚನ್ನೇಗೌಡ, ಹರೀಶ್, ದಲಿತ ಹಿರಿಯ ಮುಖಂಡರಾದ ಕೃಷ್ಣದಾಸ್, ಅಂಬೂಗ ಮಲ್ಲೇಶ್ ಇತರರು ಉಪಸ್ಥಿತರಿದ್ದರು.

You cannot copy content of this page

Exit mobile version