ಹಾಸನ ಮಾರುಕಟ್ಟೆಯಲ್ಲಿ ಅನಧಿಕೃತ ಬೀದಿಬದಿ ಅಂಗಡಿಗಳ ತೆರವು – ಕಾರ್ಮಿಕರ ಆಕ್ರೋಶ

ಹಾಸನ: ನಗರದ ಕಟ್ಟಿನಕೆರೆ ಮಾರುಕಟ್ಟೆ ಪ್ರದೇಶದಲ್ಲಿ ರಸ್ತೆ ಬದಿ ಹಾಗೂ ರಸ್ತೆ ಒತ್ತುವರಿ ಮಾಡಿಕೊಂಡು ನಿರ್ಮಿಸಲಾಗಿದ್ದ ಅನಧಿಕೃತ ಗೂಡಂಗಡಿಗಳ ವಿರುದ್ಧ ಮಹಾನಗರಪಾಲಿಕೆ ಅಧಿಕಾರಿಗಳು ಮಂಗಳವಾರ ತೆರವು ಕಾರ್ಯಾಚರಣೆ ನಡೆಸಿದರು.

ರಸ್ತೆ ಒತ್ತುವರಿ ಮಾಡಿಕೊಂಡು ಅಂಗಡಿಗಳನ್ನು ನಿರ್ಮಿಸಿಕೊಂಡಿದ್ದ ವ್ಯಾಪಾರಿಗಳಿಗೆ ಪೂರ್ವ ಸೂಚನೆ ನೀಡಿ ಗಡುವು ನೀಡಲಾಗಿತ್ತು. ಆದರೆ ನೀಡಿದ ಅವಧಿಯೊಳಗೆ ತೆರವುಗೊಳಿಸದ ಹಿನ್ನಲೆಯಲ್ಲಿ ಮಹಾನಗರಪಾಲಿಕೆ ಸಿಬ್ಬಂದಿ ಕಠಿಣ ಕ್ರಮಕ್ಕೆ ಮುಂದಾದರು. ಮಹಾನಗರಪಾಲಿಕೆ ಇಂಜಿನಿಯರ್ ಕವಿತಾ ಅವರ ನೇತೃತ್ವದಲ್ಲಿ ನಡೆದ ಕಾರ್ಯಾಚರಣೆಯಲ್ಲಿ ಜೆಸಿಬಿ ಯಂತ್ರದ ಮೂಲಕ ಹತ್ತಾರು ಅನಧಿಕೃತ ಗೂಡಂಗಡಿಗಳನ್ನು ತೆರವುಗೊಳಿಸಲಾಯಿತು.

ಪೌರಕಾರ್ಮಿಕರು ಹಾಗೂ ಅಧಿಕಾರಿಗಳ ಸಮ್ಮುಖದಲ್ಲಿ ಶಾಂತಿಯುತವಾಗಿ ಕಾರ್ಯಾಚರಣೆ ನಡೆಸಲಾಯಿತು., ಯಾವುದೇ

ಮಾರುಕಟ್ಟೆಗೆ ಆಗಮಿಸುವ ಸಾರ್ವಜನಿಕರಿಗೆ ಸಂಚಾರದಲ್ಲಿ ತೊಂದರೆ ಉಂಟಾಗುತ್ತಿರುವುದು ಹಾಗೂ ರಸ್ತೆ ಸಂಕುಚಿತವಾಗುತ್ತಿರುವುದನ್ನು ಗಮನದಲ್ಲಿಟ್ಟುಕೊಂಡು ಈ ಕ್ರಮ ಕೈಗೊಳ್ಳಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Related Articles

ಇತ್ತೀಚಿನ ಸುದ್ದಿಗಳು