Home Uncategorized ‘ಅದಾನಿ ಕುರಿತ ಪೋಸ್ಟ್‌ಗಳನ್ನು ತೆಗೆದುಹಾಕಿ’: ಮಾಧ್ಯಮ, ಸಾಮಾಜಿಕ ಮಾಧ್ಯಮ ಸಂಸ್ಥೆಗಳಿಗೆ ಕೇಂದ್ರ ಸರ್ಕಾರದಿಂದ ಆದೇಶ

‘ಅದಾನಿ ಕುರಿತ ಪೋಸ್ಟ್‌ಗಳನ್ನು ತೆಗೆದುಹಾಕಿ’: ಮಾಧ್ಯಮ, ಸಾಮಾಜಿಕ ಮಾಧ್ಯಮ ಸಂಸ್ಥೆಗಳಿಗೆ ಕೇಂದ್ರ ಸರ್ಕಾರದಿಂದ ಆದೇಶ

0

ಹೊಸದಿಲ್ಲಿ: ಅದಾನಿ ಗ್ರೂಪ್ ವಿರುದ್ಧ ಇರುವ 138 ವಿಡಿಯೋಗಳು ಮತ್ತು 83 ಇನ್‌ಸ್ಟಾಗ್ರಾಮ್ ಪೋಸ್ಟ್‌ಗಳನ್ನು ತೆಗೆದುಹಾಕುವಂತೆ ಕೇಂದ್ರ ವಾರ್ತಾ ಮತ್ತು ಪ್ರಸಾರ ಸಚಿವಾಲಯವು ಎರಡು ಮಾಧ್ಯಮ ಸಂಸ್ಥೆಗಳು, ಹಲವಾರು ಯೂಟ್ಯೂಬ್ ಚಾನೆಲ್‌ಗಳು ಮತ್ತು ಸಾಮಾಜಿಕ ಮಾಧ್ಯಮ ವೇದಿಕೆಗಳಿಗೆ ನಿರ್ದೇಶನಗಳನ್ನು ನೀಡಿದೆ.

ಅದಾನಿ ಎಂಟರ್‌ಪ್ರೈಸಸ್ ದಾಖಲಿಸಿದ್ದ ಮಾನನಷ್ಟ ಮೊಕದ್ದಮೆಯ ವಿಚಾರಣೆ ನಡೆಸಿದ ವಾಯುವ್ಯ ದೆಹಲಿ ಜಿಲ್ಲಾ ನ್ಯಾಯಾಲಯವು ಈ ತಿಂಗಳ 6 ರಂದು ನೀಡಿದ ಆದೇಶದ ಮೇರೆಗೆ ಈ ನಿರ್ದೇಶನಗಳನ್ನು ನೀಡಲಾಗುತ್ತಿದೆ ಎಂದು ಕೇಂದ್ರವು ಸ್ಪಷ್ಟಪಡಿಸಿದೆ.

ಪರಂಜೋಯ್ ಗುಹಾ ಠಾಕುರ್ತಾ, ರವಿ ನಾಯರ್, ಅಬೀರ್ ದಾಸ್‌ಗುಪ್ತಾ, ಅಯಸ್‌ಕಾಂತ್ ದಾಸ್, ಆಯುಷ್ ಜೋಶಿ ಸೇರಿದಂತೆ ಹಲವು ಪತ್ರಕರ್ತರು ಮತ್ತು ಹಕ್ಕುಗಳ ಕಾರ್ಯಕರ್ತರಿಗೆ ಸಂಬಂಧಿಸಿದ ಸುದ್ದಿ ವರದಿಗಳು ಮತ್ತು ಸಾಮಾಜಿಕ ಮಾಧ್ಯಮ ಪೋಸ್ಟ್‌ಗಳನ್ನು ತೆಗೆದುಹಾಕಲು ನ್ಯಾಯಾಲಯವು ಆದೇಶಿಸಿತ್ತು.

ಆದರೆ, ಈ ಪ್ರಕರಣದಲ್ಲಿ ಪ್ರತಿವಾದಿಗಳಾಗಿದ್ದ ಕೆಲವರ ವಾದವನ್ನು ಕೇಳದೆಯೇ ನ್ಯಾಯಾಲಯವು ಏಕಪಕ್ಷೀಯ ಆದೇಶಗಳನ್ನು (Ex-Parte) ನೀಡಿದೆ. ಅಷ್ಟೇ ಅಲ್ಲದೆ, ಕೇಂದ್ರ ವಾರ್ತಾ ಮತ್ತು ಪ್ರಸಾರ ಸಚಿವಾಲಯದಿಂದ ನೋಟಿಸ್ ಸ್ವೀಕರಿಸಿದ ಕೆಲವರು ವಾಸ್ತವವಾಗಿ ಈ ಮೊಕದ್ದಮೆಯಲ್ಲಿ ಪ್ರತಿವಾದಿಗಳೇ ಅಲ್ಲ ಎಂದೂ ತಿಳಿದುಬಂದಿದೆ.

You cannot copy content of this page

Exit mobile version