ರೇಣುಕಾಸ್ವಾಮಿ ಕೊಲೆ ಪ್ರಕರಣ: ಐವರು ಆರೋಪಿಗಳ ಜಾಮೀನು ರದ್ದತಿ ಕೋರಿದ್ದ ಸರ್ಕಾರದ ಅರ್ಜಿ ಹೈಕೋರ್ಟ್‌ನಲ್ಲಿ ವಜಾ!

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜಾಮೀನು ಪಡೆದಿರುವ ಐವರು ಆರೋಪಿಗಳ ಜಾಮೀನನ್ನು ರದ್ದುಗೊಳಿಸುವಂತೆ ಕೋರಿ ರಾಜ್ಯ ಸರ್ಕಾರ ಸಲ್ಲಿಸಿದ್ದ ಅರ್ಜಿಯನ್ನು ಕರ್ನಾಟಕ ಹೈಕೋರ್ಟ್ ಬುಧವಾರ ವಜಾಗೊಳಿಸಿದೆ.

ಪ್ರಕರಣದ ಪ್ರಮುಖ ಆರೋಪಿಗಳಾದ ನಟ ದರ್ಶನ್ ಮತ್ತು ಅವರ ಸ್ನೇಹಿತೆ ಪವಿತ್ರಾ ಗೌಡ ಪ್ರಸ್ತುತ ನ್ಯಾಯಾಂಗ ಬಂಧನದಲ್ಲಿದ್ದಾರೆ. ಹೈಕೋರ್ಟ್‌ನ ನ್ಯಾಯಮೂರ್ತಿ ಎಸ್. ರಾಚಯ್ಯ ಅವರಿದ್ದ ಏಕಸದಸ್ಯ ಪೀಠವು ಸರ್ಕಾರದ ಅರ್ಜಿಯನ್ನು ತಿರಸ್ಕರಿಸಿ ಆದೇಶ ಹೊರಡಿಸಿದೆ.

ಪ್ರಕರಣದ ಒಂಬತ್ತನೇ ಆರೋಪಿ ಧನರಾಜು ಡಿ., ಮೂರನೇ ಆರೋಪಿ ಪುಟ್ಟಸ್ವಾಮಿ ಅಲಿಯಾಸ್ ಪವನ್ ಕೆ., ನಾಲ್ಕನೇ ಆರೋಪಿ ರಾಘವೇಂದ್ರ, ಐದನೇ ಆರೋಪಿ ನಂದೀಶ್ ಮತ್ತು ಹತ್ತನೇ ಆರೋಪಿ ವಿ. ವಿನಯ್ ಅವರಿಗೆ ಮಂಜೂರಾಗಿದ್ದ ಜಾಮೀನನ್ನು ರದ್ದುಗೊಳಿಸುವಂತೆ ಪ್ರಾಸಿಕ್ಯೂಷನ್ ಕೋರ್ಟ್ ಮೆಟ್ಟಿಲೇರಿತ್ತು. ಈ ಐವರಿಗೂ ಕಳೆದ 2024ರ ಡಿಸೆಂಬರ್ 23 ರಂದು ಕೆಳ ನ್ಯಾಯಾಲಯವು ಜಾಮೀನು ಮಂಜೂರು ಮಾಡಿತ್ತು.

Related Articles

ಇತ್ತೀಚಿನ ಸುದ್ದಿಗಳು