Friday, March 13, 2026

ಸತ್ಯ | ನ್ಯಾಯ |ಧರ್ಮ

ಕಾಂಗ್ರೆಸ್ ಗೆದ್ದರೆ ಮುಸ್ಲಿಮರಿಗೆ ಮೀಸಲಾತಿ ಎಂಬುದು ಶುದ್ಧ ಸುಳ್ಳು : ಮುಖ್ಯಮಂತ್ರಿ ಸಿದ್ದರಾಮಯ್ಯ

ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಗೆದ್ದರೆ ಮುಸ್ಲಿಮರಿಗೆ ಮಾತ್ರ ಮೀಸಲಾತಿ ನೀಡುತ್ತೇವೆ ಎಂಬ ಹೇಳಿಕೆ ಶುದ್ಧ ಸುಳ್ಳು. ಇದು ಬಿಜೆಪಿ ಪಕ್ಷದ ದಾರಿ ತಪ್ಪಿಸುವ ಹೇಳಿಕೆ. ಬಿಜೆಪಿಗೆ ಇದರ ಹೊರತಾಗಿ ಬೇರೆ ದಾರಿ ಇಲ್ಲದ ಹಿನ್ನೆಲೆಯಲ್ಲಿ ಈ ರೀತಿಯಾಗಿ ಸುಳ್ಳು ಹಬ್ಬಿಸುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಇಂದು ಬೆಳಿಗ್ಗೆ ಕಲಬುರಗಿಯಲ್ಲಿ ನಡೆಯುತ್ತಿರುವ ಚುನಾವಣಾ ಭಾಷಣದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮತ ಪಡೆಯಲು ಪ್ರಧಾನಿ ಮೋದಿ ಈ ರೀತಿ ಹೇಳಿಕೆ ನೀಡುತ್ತಿದ್ದಾರೆ. ಮೋದಿ ಅವರು ವೋಟಿಗಾಗಿ ಇಂತಹ ಕೀಳುಮಟ್ಟಕ್ಕೆ ಇಳಿಯಬಾರದು. ಸಂವಿಧಾನ ಏನು ಹೇಳುತ್ತದೆ ಅದು ಮಾಡಬೇಕು ಎಂದು ಕಿಡಿಕಾರಿದ್ದಾರೆ.

ರಾಜ್ಯದಲ್ಲಿ ಮೊದಲ ಹಂತದ ಲೋಕಸಭೆ ಚುನಾವಣೆಯಲ್ಲಿ ಹೆಚ್ಚು ಸೀಟು ಗೆಲ್ಲಲಿದ್ದೇವೆ ಎಂಬ ಮಾಹಿತಿ ಸಿಕ್ಕಿದೆ. ನಮ್ಮ ಐದು ಗ್ಯಾರಂಟಿ ಯೋಜನೆಗಳು ಜನರ ಮೇಲೆ ಹೆಚ್ಚು ಪರಿಣಾಮ ಬೀರಿದೆ. ಈ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಈ ಬಾರಿ ಹೆಚ್ಚು ಸ್ಥಾನಗಳನ್ನು ಗೆಲ್ಲುತ್ತೇವೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

Related Articles

ಇತ್ತೀಚಿನ ಸುದ್ದಿಗಳು

You cannot copy content of this page