ಚನ್ನಪಟ್ಟಣ ಕ್ಷೇತ್ರದ ಉಪಚುನಾವಣೆಯಲ್ಲಿ ಬಿಜೆಪಿ ಮತ್ತು ಜೆಡಿಎಸ್ ಎರಡೂ ಪಕ್ಷದಿಂದ ಒಮ್ಮತದ ಬೆಂಬಲ ಸಿಗದ ಹಿನ್ನೆಲೆಯಲ್ಲಿ ಸಿಪಿ ಯೋಗೇಶ್ವರ್ ವಿಧಾನ ಪರಿಷತ್ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ.
ಇಂದು ವಿಮಾನದ ಮೂಲಕ ಹುಬ್ಬಳ್ಳಿ ತಲುಪಿದ ಸಿಪಿ ಯೋಗೇಶ್ವರ್ ಬಿಜೆಪಿ ಪಕ್ಷದ ಎಂಎಲ್ಸಿ ಸ್ಥಾನಕ್ಕೆ ರಾಜೀನಾಮೆ ನೀಡಿ, ರಾಜೀನಾಮೆ ಪತ್ರವನ್ನು ಸಬಾಪತಿ ಬಸವರಾಜ ಹೊರಟ್ಟಿ ಅವರಿಗೆ ಸಲ್ಲಿಸಿದ್ದಾರೆ. ರಾಜೀನಾಮೆ ಪತ್ರದಲ್ಲಿ ಯಾವುದೇ ನಿಖರ ಕಾರಣಗಳನ್ನು ಉಲ್ಲೇಖಿಸದೇ ನೇರವಾಗಿ ‘”ನಾನು ವಿಧಾನ ಪರಿಷತ್ ಸದಸ್ಯತ್ವ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸುತ್ತಿದ್ದೇನೆ” ಎಂದಷ್ಟೇ ಬರೆದು ಹೊರಟ್ಟಿಯವರಿಗೆ ಸಲ್ಲಿಸಿದ್ದಾರೆ.
ಹೀಗಾಗಿ ಚನ್ನಪಟ್ಟಣ ರಾಜಕೀಯ ಅಖಾಡ ಮತ್ತಷ್ಟು ರಂಗೇರಿದ್ದು, ಇನ್ನು ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಆಯ್ಕೆ ಯಾರಾಗಬಹುದು ಎಂಬ ಕುತೂಹಲ ಮೂಡಿಸಿದೆ. ಹಾಗೇ ಸುದ್ದಿಗಾರರೊಂದಿಗೆ ಮಾತನಾಡಿ, ಉಪಚುನಾವಣೆ ಸ್ಪರ್ಧೆಯ ಇಂಗಿತದಿಂದ ನಾನು ಇಲ್ಲಿ ಬಂದು ರಾಜೀನಾಮೆ ಸಲ್ಲಿಸಿದ್ದೇನೆ ಎಂದು ತಿಳಿಸಿದ್ದಾರೆ. ಹಾಗೆಯೇ ನಾನು ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧೆ ಮಾಡುವುದಾಗಿ ತಿಳಿಸಿದ್ದಾರೆ. ಈ ಸಂದರ್ಭದಲ್ಲಿ ತಾನು ಎಂಎಲ್ಸಿ ಸ್ಥಾನಕ್ಕೆ ಅಷ್ಟೇ ರಾಜೀನಾಮೆ ನೀಡಿದ್ದೇನೆ. ಬಿಜೆಪಿ ಪಕ್ಷಕ್ಕೆ ರಾಜೀನಾಮೆ ನೀಡಿಲ್ಲ ಎಂದು ತಿಳಿಸಿದ್ದಾರೆ.