Home ಬೆಂಗಳೂರು ವೇದಿಕೆ ಮೇಲೆ ಕುಸಿದು ಬಿದ್ದ ನಿವೃತ್ತ ಲೋಕಾಯುಕ್ತ ನ್ಯಾ. ಸಂತೋಷ್ ಹೆಗ್ಡೆ; ಮಣಿಪಾಲ ಆಸ್ಪತ್ರೆಗೆ ದಾಖಲು

ವೇದಿಕೆ ಮೇಲೆ ಕುಸಿದು ಬಿದ್ದ ನಿವೃತ್ತ ಲೋಕಾಯುಕ್ತ ನ್ಯಾ. ಸಂತೋಷ್ ಹೆಗ್ಡೆ; ಮಣಿಪಾಲ ಆಸ್ಪತ್ರೆಗೆ ದಾಖಲು

0

ನಿವೃತ್ತ ಲೋಕಾಯುಕ್ತ ನ್ಯಾಯಮೂರ್ತಿ ಸಂತೋಷ್ ಹೆಗ್ಡೆ ಅವರು ಇಂದು ಬೆಂಗಳೂರಿನ ಕೊಂಡಜ್ಜಿ ಬಸಪ್ಪ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ವೇದಿಕೆ ಮೇಲೆ ತೀವ್ರ ಅಸ್ವಸ್ಥರಾಗಿ ಕುಸಿದು ಬಿದ್ದ ಘಟನೆ ನಡೆದಿದೆ. ತಕ್ಷಣವೇ ಅವರನ್ನು ಹೈಗ್ರೌಂಡ್ಸ್ ಠಾಣೆ ಬಳಿಯ ಮಣಿಪಾಲ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಪ್ರಸ್ತುತ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಸ್ಕೌಟ್ಸ್ & ಗೈಡ್ಸ್ ಆಯುಕ್ತ ಪಿಜಿಆರ್ ಸಿಂಧ್ಯಾ ಅವರ ಅಭಿನಂದನಾ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ನ್ಯಾ. ಸಂತೋಷ್ ಹೆಗ್ಡೆ ಅವರು ವೇದಿಕೆ ಮೇಲೆ ಭಾಷಣ ಮಾಡಿದರು. ಭಾಷಣ ಮುಕ್ತಾಯಗೊಳಿಸಿ ಕುಳಿತುಕೊಳ್ಳಲು ತಿರುಗಿದ ಸಮಯದಲ್ಲಿ ದಿಢೀರ್ ಅಸ್ವಸ್ಥರಾಗಿ ಕುಸಿದು ಬಿದ್ದರು. ವೇದಿಕೆ ಮೇಲಿದ್ದ ಸಿಬ್ಬಂದಿ ಹಾಗೂ ಉಪಸ್ಥಿತರಿದ್ದವರು ತಕ್ಷಣ ಸ್ಪಂದಿಸಿ ಅವರಿಗೆ ನೆರವು ನೀಡಿದರು.

ಇದೇ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ವಿಧಾನಸಭಾ ಸ್ಪೀಕರ್ ಯುಟಿ ಖಾದರ್ ಅವರು ತ್ವರಿತವಾಗಿ ಪರಿಸ್ಥಿತಿಗೆ ಸ್ಪಂದಿಸಿ, ತಮ್ಮ ವಾಹನದಲ್ಲಿ ನ್ಯಾ. ಹೆಗ್ಡೆ ಅವರನ್ನು ಮಣಿಪಾಲ ಆಸ್ಪತ್ರೆಗೆ ಕರೆದೊಯ್ಯುವ ವ್ಯವಸ್ಥೆ ಮಾಡಿದರು. ಅವರ ಆರೋಗ್ಯ ಸ್ಥಿತಿಯ ಕುರಿತು ಇನ್ನಷ್ಟು ಮಾಹಿತಿ ಇನ್ನೂ ಲಭ್ಯವಾಗಿಲ್ಲ.

You cannot copy content of this page

Exit mobile version