Monday, July 28, 2025

ಸತ್ಯ | ನ್ಯಾಯ |ಧರ್ಮ

ತೆಲಂಗಾಣದ ಮುಖ್ಯಮಂತ್ರಿಯಾಗಿ ರೇವಂತ್ ರೆಡ್ಡಿ ಅಧಿಕಾರ ಸ್ವೀಕಾರ, ಕಾಂಗ್ರೆಸ್ ನ ಹಲವು ಗಣ್ಯರು ಭಾಗಿ

ತೆಲಂಗಾಣದಲ್ಲಿ ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ಪೂರ್ಣ ಬಹುಮತ ಪಡೆದ ಕಾಂಗ್ರೆಸ್ ಪಕ್ಷ ಇಂದು ಸರ್ಕಾರ ರಚಿಸಿದೆ. ತೆಲಂಗಾಣದ ನೂತನ ಮುಖ್ಯಮಂತ್ರಿಯಾಗಿ ರೇವಂತ್ ರೆಡ್ಡಿ ಪ್ರಮಾಣವಚನ ಸ್ವೀಕರಿಸಿದ್ದಾರೆ. ತೆಲಂಗಾಣ ರಾಜ್ಯಪಾಲೆ ತಮಿಳ್‌ಸಾಯಿ ಸೌಂದರ್ಯರಾಜನ್ ಪ್ರತಿಜ್ಞಾವಿಧಿ ಬೋಧಿಸಿದ್ದಾರೆ.

ಉಪಮುಖ್ಯಮಂತ್ರಿಯಾಗಿ ಭಟ್ಟಿ ವಿಕ್ರಮಾರ್ಕ ಮಲ್ಲು ಪ್ರಮಾಣ ವಚನ ಸ್ವೀಕರಿಸಿದ್ದಾರೆ. ರೇವಂತ್ ರೆಡ್ಡಿ ಜೊತೆ 12 ಸಚಿವರು ಪ್ರಮಾಣ ವಚನ ಸ್ವೀಕರಿಸಿದ್ದಾರೆ.

ಹೈದರಾಬಾದ್ ನ ಎಲ್‌ಬಿ ಕ್ರೀಡಾಂಗಣದಲ್ಲಿ ಆಯೋಜಿಸಿದ್ದ ಪ್ರಮಾಣ ವಚನ ಸಮಾರಂಭ ಕಾರ್ಯಕ್ರಮಕ್ಕೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಸೋನಿಯಾ ಗಾಂಧಿ ಹಿಮಾಚಲ ಪ್ರದೇಶದ ಸಿಎಂ, ಕರ್ನಾಟಕ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಪ್ರಿಯಾಂಕಾ ಗಾಂಧಿ ಸೇರಿದಂತೆ ಹಲವು ನಾಯಕರು ಪಾಲ್ಗೊಂಡಿದ್ದರು.

ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ ಕಾರ್ಯಕ್ರಮದ ಉದ್ದೇಶದಿಂದ ತೆಲಂಗಾಣಕ್ಕೆ ಹೋದರೂ, ಟ್ರಾಫಿಕ್ ಸಮಸ್ಯೆಯ ಕಾರಣಕ್ಕೆ ಸರಿಯಾದ ಸಮಯಕ್ಕೆ ಪ್ರಮಾಣ ವಚನ ಸಮಾರಂಭಕ್ಕೆ ತಲುಪಲಾಗಿಲ್ಲ ಎಂದು ವರದಿಯಾಗಿದೆ.

Related Articles

ಇತ್ತೀಚಿನ ಸುದ್ದಿಗಳು

You cannot copy content of this page