ಗ್ರಾಮ ಪಂಚಾಯಿತಿ ಚುನಾವಣೆ ಪರಿಷ್ಕೃತ ವೇಳಾಪಟ್ಟಿ ಪ್ರಕಟ ; ಇಲ್ಲಿದೆ ಮಾಹಿತಿ

ರಾಜ್ಯ ಸರ್ಕಾರದ ಮನವಿ ಮೇರೆಗೆ ಮೇ 11ರಂದು ನಡೆಯಬೇಕಿದ್ದ ಗ್ರಾಪಂ ನಲ್ಲಿ ತೆರವಾಗಿದ್ದ 265 ಸ್ಥಾನಗಳಿಗೆ ನಡೆಯಬೇಕಿದ್ದ ಉಪಚುನಾವಣೆಯನ್ನು ಮುಂದೂಡಿದ್ದ ರಾಜ್ಯಚುನಾವಣಾ ಆಯೋಗ ಪರಿಷ್ಕೃತ ವೇಳಾಪಟ್ಟಿ ಪ್ರಕಟಿಸಿದೆ. ಅದರಂತೆ, ಮೇ.25 ರಂದು ಮತದಾನ ನಡೆಯಲಿದೆ ಎಂದು ಘೋಷಿಸಿದೆ.

ಮೇ 14ರಂದು ನಾಮಪತ್ರ ಸಲ್ಲಿಸಲು ಕೊನೆಯ ದಿನವಾಗಿದೆ. ಮೇ. 15ರಂದು ಉಮೇದುವಾರಿಕೆ ಪರಿಶೀಲನೆ ನಡೆಯಲಿದೆ.31 ಜಿಲ್ಲೆಯ 135 ತಾಲೂಕಿನ 223 ಗ್ರಾಪಂನ 265 ಸ್ಥಾನಗಳಿಗೆ ಉಪ ಚುನಾವಣೆ ನಡೆಯಲಿದೆ ಎಂದು ರಾಜ್ಯ ಚುನಾವಣಾ ಆಯೋಗ ತಿಳಿಸಿದೆ.

ಮೇ. 17ರಂದು ನಾಮಪತ್ರಗಳ ವಾಪಸ್ ಪಡೆಯಲು ಕೊನೆಯ ದಿನವಾಗಿರುತ್ತದೆ. ಮೇ. 25ರಂದು ಮತದಾನ ನಡೆಯಲಿದೆ. ಮೇ. 28ರಂದು ಮತ ಎಣಿಕೆ ನಡೆಸಲಿದೆ ಎಂದು ರಾಜ್ಯ ಚುನಾವಣಾ ಆಯೋಗ ಮಾಹಿತಿ ನೀಡಿದೆ.

Related Articles

ಇತ್ತೀಚಿನ ಸುದ್ದಿಗಳು