Home ರಾಜ್ಯ ಬೆಳಗಾವಿ ಎರಡು ತಿಂಗಳ ಗೃಹಲಕ್ಷ್ಮಿ ಹಣ ಶೀಘ್ರದಲ್ಲೇ ಜಮಾ – ಲಕ್ಷ್ಮಿ ಹೆಬ್ಬಾಳ್ಕರ್ 

ಎರಡು ತಿಂಗಳ ಗೃಹಲಕ್ಷ್ಮಿ ಹಣ ಶೀಘ್ರದಲ್ಲೇ ಜಮಾ – ಲಕ್ಷ್ಮಿ ಹೆಬ್ಬಾಳ್ಕರ್ 

ಬೆಳಗಾವಿ: ಎರಡು ತಿಂಗಳ ಗೃಹಲಕ್ಷ್ಮಿ (Gruhalakshmi) ಯೋಜನೆಯ ಹಣ (Money) ಬಿಡುಗಡೆಯ ಬಗ್ಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ (Laxmi Hebbalkar) ಮಹತ್ವದ ಘೋಷಣೆ ಮಾಡಿದ್ದಾರೆ.

ಬೆಳಗಾವಿ ಜಿಲ್ಲೆಯ ಖಾನಾಪುರ ತಾಲೂಕಿನ ನಂದಗಡ ಗ್ರಾಮದಲ್ಲಿ ಸಂಗೊಳ್ಳಿ ರಾಯಣ್ಣ ವೀರಭೂಮಿ ಸ್ಮಾರಕದ ಲೋಕಾರ್ಪಣೆ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯ ಎರಡು ತಿಂಗಳ ಗೃಹಲಕ್ಷ್ಮಿ ಯೋಜನೆಯ ಹಣ ಬಿಡುಗಡೆ ಮಾಡಿದ್ದಾರೆ. ಹೀಗಾಗಿ ಹಣ ಶೀಘ್ರದಲ್ಲೇ ಫಲಾನುಭವಿಗಳ ಖಾತೆಗೆ ಜಮಾ ಆಗಲಿದೆ ಎಂದು ತಿಳಿಸಿದ್ದಾರೆ. ಇವತ್ತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಎರಡು ತಿಂಗಳ ಗೃಹಲಕ್ಷ್ಮಿ ಹಣ ಬಿಡುಗಡೆ ಮಾಡಿದ್ದೇನೆ. ಆದಷ್ಟು ಬೇಗ ಅವರ ಖಾತೆಗೆ ಹಾಕುವಂತೆ ಸೂಚನೆ ನೀಡಿದ್ದಾರೆ ಎಂದು ಘೋಷಿಸಿದರು. ಇದನ್ನು ಕೇಳಿ ಸಭೆಯಲ್ಲಿ ಸಂತಸದ ವಾತಾವರಣ ನಿರ್ಮಾಣವಾಯಿತು. ಗೃಹಲಕ್ಷ್ಮಿ ಯೋಜನೆಯಡಿ ಪ್ರತಿ ಮಹಿಳೆಗೆ ಪ್ರತಿ ತಿಂಗಳು 2,000 ರೂಪಾಯಿ ನೀಡಲಾಗುತ್ತದೆ. ಕೆಲವು ತಿಂಗಳುಗಳಿಂದ ಹಣ ಬಿಡುಗಡೆಯಲ್ಲಿ ವಿಳಂಬವಾಗುತ್ತಿದ್ದುದರಿಂದ ಮಹಿಳೆಯರು ಚಿಂತಿತರಾಗಿದ್ದರು. ಈ ಘೋಷಣೆಯಿಂದ ಅವರಿಗೆ ಭರವಸೆ ಮೂಡಿದೆ.

You cannot copy content of this page

Exit mobile version