Wednesday, August 20, 2025

ಸತ್ಯ | ನ್ಯಾಯ |ಧರ್ಮ

ಛತ್ತೀಸಗಢ: ಭುಗಿಲೆದ್ದ ಗಲಭೆ, ಕಲೆಕ್ಟರೇಟ್ ಬಳಿಯಿದ್ದ 200 ವಾಹನಗಳಿಗೆ ಬೆಂಕಿ

ಛತ್ತೀಸ್‌ಗಢದ ಬಲೋದಾಬಜಾರ್‌ನಲ್ಲಿ ಗುಂಪೊಂದು ನಡೆಸಿದ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿದೆ. ಜಿಲ್ಲಾಧಿಕಾರಿ ಕಚೇರಿಗೆ ಮುತ್ತಿಗೆ ಹಾಕಲು ಬರುತ್ತಿದ್ದ ಪ್ರತಿಭಟನಾಕಾರರನ್ನು ಪೊಲೀಸರು ತಡೆದಿದ್ದರಿಂದ ಉದ್ವಿಗ್ನ ಸ್ಥಿತಿ ನಿರ್ಮಾಣವಾಯಿತು.

ಈ ವೇಳೆ ಕೆಲ ಪ್ರತಿಭಟನಾಕಾರರು ಜಿಲ್ಲಾಧಿಕಾರಿ ಕಚೇರಿ ಆವರಣಕ್ಕೆ ನುಗ್ಗಿ ಅಲ್ಲಿದ್ದ 200 ವಾಹನಗಳಿಗೆ ಬೆಂಕಿ ಹಚ್ಚಿದರು. ಘಟನೆಯಲ್ಲಿ ಕೆಲ ಪೊಲೀಸರು ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ.

ಕಳೆದ ತಿಂಗಳು ಗಿರೋದ್‌ಪುರಿ ಪ್ರದೇಶದಲ್ಲಿ ಸಮುದಾಯವೊಂದಕ್ಕೆ ಸೇರಿದ ಧಾರ್ಮಿಕ ಸ್ಥಳವನ್ನು ಅಪರಿಚಿತ ವ್ಯಕ್ತಿಗಳು ಧ್ವಂಸಗೊಳಿಸಿದ್ದರು. ಇದರಿಂದ ಆ ಸಮುದಾಯಕ್ಕೆ ಸೇರಿದ ಸಾವಿರಾರು ಜನರು ದಸರಾ ಮೈದಾನದಲ್ಲಿ ಹಲವು ದಿನಗಳಿಂದ ಪ್ರತಿಭಟನೆ ನಡೆಸುತ್ತಿದ್ದು, ಘಟನೆಗೆ ಕಾರಣರಾದವರನ್ನು ಬಂಧಿಸುವಂತೆ ಒತ್ತಾಯಿಸಿದ್ದಾರೆ.

ಇದೇ ವಿಷಯವಾಗಿ ಸೋಮವಾರ ಜಿಲ್ಲಾಧಿಕಾರಿ ಕಚೇರಿ ಹಾಗೂ ಜಿಲ್ಲಾ ಪಂಚಾಯಿತಿ ಕಚೇರಿಗಳಿಗೆ ಮುತ್ತಿಗೆ ಹಾಕಿದಾಗ ಪ್ರತಿಭಟನೆ ರಣರಂಗವಾಗಿ ಮಾರ್ಪಟ್ಟಿತು. ಇದಕ್ಕೆ ಪ್ರತಿಕ್ರಿಯಿಸಿದ ಸ್ಥಳೀಯ ಪೊಲೀಸರು, ಪ್ರತಿಭಟನಾಕಾರರನ್ನು ತಡೆಯಲು ಭಾರಿ ಭದ್ರತೆ ಏರ್ಪಡಿಸಲಾಗಿತ್ತು ಮತ್ತು ಬ್ಯಾರಿಕೇಡ್‌ಗಳನ್ನು ಹಾಕಲಾಗಿತ್ತು, ಆದರೆ ಅವರು ಅವರನ್ನು ತಡೆಯಲು ವಿಫಲರಾದರು.

Related Articles

ಇತ್ತೀಚಿನ ಸುದ್ದಿಗಳು

You cannot copy content of this page