ಛತ್ತೀಸಘಡದಲ್ಲಿ ಭೀಕರ ರಸ್ತೆ ಅಪಘಾತ : 13 ಮಂದಿ ಸಾವು

ಛತ್ತೀಸ್ ಗಢದಲ್ಲಿ ಎರಡು ಟ್ರಕ್ ಗಳ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ 13 ಮಂದಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಜೊತೆಗೆ 11 ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ.

ಛತ್ತೀಸ್ ಗಢದ ರಾಯಪುರ ಬಲೋಡಾಬಜಾರ್ ರಸ್ತೆಯಲ್ಲಿ ಸೋಮವಾರ ಮುಂಜಾನೆ ಸಂಭವಿಸಿದ ಈ ಅಪಘಾತದಲ್ಲಿ ಎರಡೂ ಟ್ರಕ್ ಗಳು ನಜ್ಜುಗುಜ್ಜಾಗಿವೆ.

ಚೌತಿಯಾ ಚಟ್ಟಿ ಕಾರ್ಯಕ್ರಮ ಮುಗಿಸಿ ವಾಪಸ್ ಬರುವ ವೇಳೆ ಅವಘಡ ನಡೆದಿದೆ. ಅತಿಯಾದ ವೇಗದ ಚಾಲನೆಯಿಂದ ನಿಯಂತ್ರಣ ತಪ್ಪಿ ಅಪಘಾತ ನಡೆದಿದೆ. ಮೃತರ ಸಂಖ್ಯೆ ಇನ್ನಷ್ಟು ಹೆಚ್ಚಾಗುವ ಸಾಧ್ಯತೆ ಇದೆ. ಸ್ಥಳೀಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ.

ಗಾಯಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಓವರ್ ಲೋಡಿಂಗ್ ನಿಂದ ಅಪಘಾತ ನಡೆದಿದೆ ಎಂದು ಸ್ಥಳೀಯರು ಹೇಳಿದ್ದಾರೆ.

Related Articles

ಇತ್ತೀಚಿನ ಸುದ್ದಿಗಳು