Thursday, June 20, 2024

ಸತ್ಯ | ನ್ಯಾಯ |ಧರ್ಮ

ಚಿತ್ರದುರ್ಗ | ಭೀಕರ ಅಪಘಾತ; ಇಬ್ಬರು ಸ್ಥಳದಲ್ಲೇ ಸಾವು

ಚಿತ್ರದುರ್ಗ : ಚಿತ್ರದುರ್ಗ ಜಿಲ್ಲೆಯಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಇಬ್ಬರು ಕುರಿ ವ್ಯಾಪಾರಿಗಳು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ.

ಮುಂದೆ ಚಲಿಸುತ್ತಿದ್ದ ಲಾರಿಗೆ ಅಶೋಕ್ ಲೈಲಾಂಡ್ ಗಾಡಿ ಡಿಕ್ಕಿಯಾಗಿ ಇಬ್ಬರು ಕುರಿ ವ್ಯಾಪಾರಿಗಳು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಹಿರಿಯೂರು ಹೊರವಲಯದ ಆರ್ ಕೆ ಪವರ್ ಜಿಮ್ ಬಳಿ ಘಟನೆ ನಡೆದಿದೆ.

ಮೃತರನ್ನು ಚಳ್ಳಕೆರೆ ತಾಲೂಕಿನ ಹುಲಿಕುಂಟೆ ಗ್ರಾಮದ ರಮೇಶ್ ( 55)ಹಾಗೂ ಬೆಳೆಗೆರೆ ಶಿವಲಿಂಗಪ್ಪ ( 65) ವರ್ಷ ಎಂದು ಗುರುತಿಸಲಾಗಿದೆ.‌

ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗಿದ್ದು, ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರೆಸಿದ್ದಾರೆ.

Related Articles

ಇತ್ತೀಚಿನ ಸುದ್ದಿಗಳು