ಮಾರಕಾಸ್ತ್ರ ತೋರಿಸಿ ಚಿನ್ನದಂಗಡಿ ದೋಚಿ ಪರಾರಿ – ಪ್ರಕರಣ ದಾಖಲು

ಬೆಂಗಳೂರು : ನೆಲಮಂಗಲದ (Nelamangala)ಟಿ.ಬೇಗೂರಿನ ಮಹಾಲಕ್ಷ್ಮೀ ಜ್ಯುವೆಲರ್ಸ್‌ಗೆ (Jewellers )ನುಗ್ಗಿದ ಮೂವರು ದರೋಡೆಕೋರರು (Robberers ) ಹಾಡಹಗಲೇ ಮಾರಕಾಸ್ತ್ರ ತೋರಿಸಿ ಚಿನ್ನದ ಉಂಗುರಗಳನ್ನು ದೋಚಿ ಪರಾರಿಯಾಗಿದ್ದಾರೆ.

ಈ ಬಗ್ಗೆ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ನೆಲಮಂಗಲ ಭಾಗದಲ್ಲಿ ಮೇಲಿಂದ ಮೇಲೆ ದರೋಡೆ ಪ್ರಕರಣಗಳು ನಡೆಯುತ್ತಿರೋದು ಸ್ಥಳೀಯರ ಆತಂಕಕ್ಕೆ ಕಾರಣವಾಗಿದ್ದು, ಈ ನಿಟ್ಟಿನಲ್ಲಿ ಪೊಲೀಸರು ಅಗತ್ಯ ಕ್ರಮ ಕೈಗೊಳ್ಳಬೇಕೆಂಬ ಆಗ್ರಹ ಕೇಳಿಬಂದಿದೆ.

ಬೈಕ್​ನಲ್ಲಿ ಬಂದಿದ್ದ ಮೂವರು ದರೋಡೆಕೋರರು ನೆಲಮಂಗಲ ತಾಲೂಕಿನ ಟಿ.ಬೇಗೂರಿನಲ್ಲಿರುವ ಮಹಾಲಕ್ಷ್ಮೀ ಜ್ಯುವೆಲರ್ಸ್​​ಗೆ ನುಗ್ಗಿದ್ದಾರೆ. ಬಂಗಾರದ ಅಂಗಡಿಯಲ್ಲಿದ್ದವರಿಗೆ ಡ್ಯಾಗರ್​​ ತೋರಿಸಿ ಬೆದರಿಸಿರುವ ಆರೋಪಿಗಳು, ಶೋ ಗ್ಲಾಸ್​​​ನಲ್ಲಿದ್ದ 20 ಉಂಗುರಗಳು ಇದ್ದ ಟ್ರೇ ದೋಚಿ ಪರಾರಿಗೆ ಯತ್ನಿಸಿದ್ದಾರೆ. ಈ ವೇಳೆ ಕೆಲ ಉಂಗುರಗಳು ರಸ್ತೆಗೆ ಬಿದ್ದಿವೆ ಎನ್ನಲಾಗಿದೆ.

ಒಟ್ಟು 5 ಉಂಗುರಗಳು ಕಳವಾಗಿರುವ ಬಗ್ಗೆ ಶಾಪ್​​ ಮಾಲೀಕರು ಪೊಲೀಸರಿಗೆ ದೂರು ನೀಡಿದ್ದು, ಕಳುವಾಗಿರುವ ಬಂಗಾರದ ಒಟ್ಟು ತೀಕ ಸುಮಾರು 35 ಗ್ರಾಂ ಎನ್ನಲಾಗಿದೆ. ನೆಲಮಂಗಲ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲಾಗಿದೆ.

ಸದ್ಯ ಗ್ರಾಮಾಂತರ ಭಾಗದ ಪೊಲೀಸರು ತನಿಖೆ ಆರಂಭಿಸಿದ್ದು, ಬಂಗಾರದ ಅಂಗಡಿಯಲ್ಲಿದ್ದ ಸಿಸಿಟಿವಿ ಕ್ಯಾಮರಾಗಳ ಪರಿಶೀಲನೆಗೆ ಮುಂದಾಗಿದ್ದಾರೆ.

Related Articles

ಇತ್ತೀಚಿನ ಸುದ್ದಿಗಳು