ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ ಅಪರೂಪದ ದಾಖಲೆಯೊಂದನ್ನು ಸಾಧಿಸಿದ್ದಾರೆ. ಇದುವರೆಗಿನ ಎಲ್ಲಾ ಐಸಿಸಿ ಟೂರ್ನಿಗಳಲ್ಲಿ ತಮ್ಮ ತಂಡವನ್ನು ಫೈನಲ್‌ಗೆ ಕೊಂಡೊಯ್ದ ಮೊದಲ ನಾಯಕ ಎಂಬ ಹೆಗ್ಗಳಿಕೆಗೆ ರೋಹಿತ್ ಪಾತ್ರರಾಗುವ ಮೂಲಕ ವಿಶ್ವ ದಾಖಲೆ ನಿರ್ಮಿಸಿದರು.
ಹಿಟ್‌ಮ್ಯಾನ್ ನಾಯಕತ್ವದಲ್ಲಿ ಭಾರತ ತಂಡ 2023ರ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್, 2023ರ ಏಕದಿನ ವಿಶ್ವಕಪ್, 2024ರ ಟಿ20 ವಿಶ್ವಕಪ್ ಮತ್ತು 2025ರ ಚಾಂಪಿಯನ್ಸ್ ಟ್ರೋಫಿಯ ಫೈನಲ್‌ಗಳನ್ನು ತಲುಪಿದೆ.
ರೋಹಿತ್ ನಾಯಕತ್ವದಲ್ಲಿ, ಟೀಮ್ ಇಂಡಿಯಾ ಕಳೆದ ವರ್ಷದ ಟಿ20 ವಿಶ್ವಕಪ್‌ನಲ್ಲಿ ಚಾಂಪಿಯನ್ ಆಗಿ ಹೊರಹೊಮ್ಮಿತು ಮತ್ತು 2023 ರ ಡಬ್ಲ್ಯೂಟಿಸಿ ಫೈನಲ್ ಮತ್ತು 2023 ರ ಏಕದಿನ ವಿಶ್ವಕಪ್‌ನಲ್ಲಿ ರನ್ನರ್ ಅಪ್ ಸ್ಥಾನ ಪಡೆಯಿತು. ನಾಯಕನಾಗಿ ಅಧಿಕಾರ ವಹಿಸಿಕೊಂಡ ಮೂರು ವರ್ಷಗಳಲ್ಲಿ, ರೋಹಿತ್ ಭಾರತವನ್ನು ನಾಲ್ಕು ಐಸಿಸಿ ಟೂರ್ನಿಗಳಲ್ಲಿ ಫೈನಲ್‌ಗೆ ಕೊಂಡೊಯ್ದಿದ್ದಾರೆ.
2025ರ ಚಾಂಪಿಯನ್ಸ್ ಟ್ರೋಫಿಯ ಸೆಮಿಫೈನಲ್ ಅನ್ನು ಆಸೀಸ್ ವಿರುದ್ಧ 4 ವಿಕೆಟ್‌ಗಳಿಂದ ಗೆಲ್ಲುವ ಮೂಲಕ ಭಾರತ ಫೈನಲ್ ತಲುಪದೆ. ಭಾರತ ಸತತ ಮೂರನೇ ಬಾರಿಗೆ (2013, 2017, 2025) ಈ ಮೆಗಾ ಟೂರ್ನಮೆಂಟ್‌ನ ಫೈನಲ್‌ಗೆ ಅರ್ಹತೆ ಪಡೆದಿರುವುದು ಗಮನಾರ್ಹ. ಒಟ್ಟಾರೆಯಾಗಿ, ಟೀಮ್ ಇಂಡಿಯಾ ಫೈನಲ್ ತಲುಪುತ್ತಿರುವುದು ಇದು ಐದನೇ ಬಾರಿ. ಬೇರೆ ಯಾವುದೇ ತಂಡವು ಮೂರು ಬಾರಿಗಿಂತ ಹೆಚ್ಚು ಪ್ರಶಸ್ತಿ ಹೋರಾಟಕ್ಕೆ ಅರ್ಹತೆ ಪಡೆದಿಲ್ಲ.