Home ಅಪರಾಧ ಮಂಗಳೂರಿನಲ್ಲಿ ರೌಡಿ ಶೀಟರ್ ಸುಹಾಸ್ ಶೆಟ್ಟಿ ಭೀಕರ ಹತ್ಯೆ

ಮಂಗಳೂರಿನಲ್ಲಿ ರೌಡಿ ಶೀಟರ್ ಸುಹಾಸ್ ಶೆಟ್ಟಿ ಭೀಕರ ಹತ್ಯೆ

0

ಮಂಗಳೂರಿನ ಬಜ್ಪೆ ಕಿನ್ನಿಪದವು ಬಳಿ ರೌಡಿ ಶೀಟರ್ ಸುಹಾಸ್ ಶೆಟ್ಟಿಯನ್ನು ಅಪರಿಚಿತ ಗುಂಪೊಂದು ಭೀಕರವಾಗಿ ಕೊಲೆ ಮಾಡಿದೆ. ರೌಡಿ ಶೀಟರ್ ಸುಹಾಸ್ ಶೆಟ್ಟಿಯನ್ನು ಬಜ್ಪೆ ಕಿನ್ನಿಪದವು ಬಳಿ ರಾತ್ರಿ 8.30 ರ ಆಸುಪಾಸಿನಲ್ಲಿ ಕಾರಿನಲ್ಲಿ ಹೋಗುವಾಗ ಅಡ್ಡಗಟ್ಟಿ ಕೊಲೆ ಮಾಡಲಾಗಿದೆ.

ಈ ಹಿಂದೆ ಸುಹಾಸ್ ಶೆಟ್ಟಿ ವಿರುದ್ಧ ಹಲವು ಕೊಲೆ ಪ್ರಯತ್ನದ ಪ್ರಕರಣಗಳು ದಾಖಲಾಗಿದ್ದವು. ಇತ್ತೀಚಿನ ದಿನಗಳಲ್ಲಿ ದಕ್ಷಿಣ ಕನ್ನಡ ಭಾಗದ ಪ್ರಮುಖ ರೌಡಿ ಶೀಟರ್ ಗಳಲ್ಲಿ ಸುಹಾಸ್ ಶೆಟ್ಟಿ ಹೆಸರು ಚಾಲ್ತಿಯಲ್ಲಿದೆ.

ಹಿಂದೂ ಕಾರ್ಯಕರ್ತ ಪ್ರವೀಣ್ ನೆಟ್ಟಾರು (Praveen Nettaru) ಹತ್ಯೆಯ ನಂತರ ಸುಹಾಸ್ ಶೆಟ್ಟಿ ಹೆಸರು ಹೆಚ್ಚು ಚಾಲ್ತಿಯಲ್ಲಿತ್ತು. ಈತ ಭಜರಂಗದಳ ಕಾರ್ಯಕರ್ತ ಎಂದು ಹೇಳಿಕೊಂಡು ಹಲವು ದೊಂಬಿ ಜಗಳಗಳಲ್ಲಿ ಈತನ ಹೆಸರು ಓಡಾಡುತ್ತಿತ್ತು.

ಪ್ರವೀಣ್ ನೆಟ್ಟಾರು ಹತ್ಯೆಯ ಪ್ರತೀಕಾರವಾಗಿ 2022ರ ಜುಲೈ 28ರಂದು ಫಾಜಿಲ್​ನ ಕೊಲೆಯಾಗಿತ್ತು. ಈ ಪ್ರಕರಣದಲ್ಲಿ ಸುಹಾಸ್ ಶೆಟ್ಟಿ‌ ಪ್ರಮುಖ ಆರೋಪಿಯಾಗಿದ್ದನು. ಸುಹಾಸ್​ ಹತ್ಯೆ ವಿಷಯ ತಿಳಿಯುತ್ತಿದ್ದಂತೆಯೇ ಮಂಗಳೂರಿನ ಎ.ಜೆ‌.ಆಸ್ಪತ್ರೆಗೆ ಮಂಗಳೂರು ದಕ್ಷಿಣ ಬಿಜೆಪಿ ಶಾಸಕ ವೇದವ್ಯಾಸ‌ ಕಾಮತ್ ಆಗಮಿಸಿದ್ದಾರೆ.

ಈ ಬಗ್ಗೆ ಮಂಗಳೂರು ನಗರ ಪೊಲೀಸ್ ಆಯುಕ್ತ ಅನುಪಮ್ ಅಗರ್ವಾಲ್ ಮಾತನಾಡಿದ್ದು, ‘ಈ ಘಟನೆ ರಾತ್ರಿ 8.27 ರ ಸುಮಾರಿಗೆ ನಡೆದಿದೆ. ಸಂಜಯ್, ಪ್ರಜ್ವಲ್, ಅನ್ವಿತ್, ಲತೀಶ್ ಮತ್ತು ಶಶಾಂಕ್ ಅವರೊಂದಿಗೆ ಕೆಎ-12-ಎಂಬಿ-3731 ವಾಹನದಲ್ಲಿ ಪ್ರಯಾಣಿಸುತ್ತಿದ್ದ ಸುಹಾಶ್ ಶೆಟ್ಟಿ ಅವರನ್ನು ಸ್ವಿಫ್ಟ್ ಕಾರು ಮತ್ತು ಪಿಕಪ್ ವಾಹನದಲ್ಲಿ ಪ್ರಯಾಣಿಸುತ್ತಿದ್ದ ದುಷ್ಕರ್ಮಿಗಳ ಗುಂಪು ಅಡ್ಡಗಟ್ಟಿದೆ. 5 ರಿಂದ 6 ಜನರಿದ್ದ ದುಷ್ಕರ್ಮಿಗಳು ಸುಹಾಶ್ ಶೆಟ್ಟಿ ಮೇಲೆ ಮಾರಕಾಯುಧಗಳಿಂದ ಹಲ್ಲೆ ನಡೆಸಿ ಗಂಭೀರ ಗಾಯಗಳನ್ನುಂಟುಮಾಡಿದರು. ಅವರನ್ನು ತಕ್ಷಣ ಎಜೆ ಆಸ್ಪತ್ರೆಗೆ ಸಾಗಿಸಲಾಯಿತು, ಅಲ್ಲಿ ಅವರು ಸಾವನ್ನಪ್ಪಿದರು. ಬಜ್ಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಗಳನ್ನು ಆದಷ್ಟು ಬೇಗ ಬಂಧಿಸಲು ಹಲವಾರು ತಂಡಗಳನ್ನು ರಚಿಸಲಾಗಿದೆ ಎಂದರು.

ಬಜರಂಗದಳದೊಂದಿಗೆ ಸಂಬಂಧ ಹೊಂದಿರುವ ಸುಹಾಸ್, ಜುಲೈ 2022 ರಂದು ಸುರತ್ಕಲ್‌ನಲ್ಲಿ ಫಾಜಿಲ್‌ನನ್ನು ಕಡಿದು ಕೊಲೆ ಮಾಡಿದ್ದ ಪ್ರಕರಣದಲ್ಲಿ ಪ್ರಮುಖ ಆರೋಪಿಯಾಗಿದ್ದ. ಬಿಜೆಪಿ ಯುವ ಮೋರ್ಚಾ ನಾಯಕ ಪ್ರವೀಣ್ ನೆಟ್ಟಾರು ಹತ್ಯೆಗೆ ಪ್ರತೀಕಾರವಾಗಿ ಫಾಜಿಲ್‌ನನ್ನು ಕೊಲೆ ಮಾಡಲಾಗಿದೆ ಎಂದು ಆರೋಪಿಸಲಾಗಿದೆ. ಸುಹಾಸ್ ಹಲವಾರು ಕೊಲೆ ಮತ್ತು ಕೊಲೆ ಯತ್ನ ಪ್ರಕರಣಗಳಲ್ಲಿ ಭಾಗಿಯಾಗಿದ್ದಾನೆ. ಆತನ ಕೊಲೆಗೆ ಕಾರಣ ಇನ್ನೂ ತಿಳಿದುಬಂದಿಲ್ಲ.

You cannot copy content of this page

Exit mobile version