Tuesday, January 27, 2026

ಸತ್ಯ | ನ್ಯಾಯ |ಧರ್ಮ

ರೋಜ್ಗಾರ್ ಮೇಳ: ಇಂದು 71 ಸಾವಿರ ಉದ್ಯೋಗ ಪತ್ರಗಳನ್ನು ವಿತರಿಸಲಿರುವ ನರೇಂದ್ರ ಮೋದಿ

ಹೊಸದಿಲ್ಲಿ: ಪ್ರಧಾನಿ ನರೇಂದ್ರ ಮೋದಿ ಅವರು ಮಂಗಳವಾರ ಎರಡನೇ ರೋಜ್ಗಾರ್ ಮೇಳದಲ್ಲಿ (ಉದ್ಯೋಗ ಮೇಳ) ಹೊಸ ನೇಮಕಾತಿದಾರರಿಗೆ ಸುಮಾರು 71,000 ನೇಮಕಾತಿ ಪತ್ರಗಳನ್ನು ವಿತರಿಸಲಿದ್ದಾರೆ.

ಉದ್ಯೋಗ ಸೃಷ್ಟಿಗೆ ಹೆಚ್ಚಿನ ಆದ್ಯತೆ ನೀಡುವ ಪ್ರಧಾನಮಂತ್ರಿಯವರ ಬದ್ಧತೆಯನ್ನು ಪೂರೈಸುವ ನಿಟ್ಟಿನಲ್ಲಿ ಈ ಡ್ರೈವ್ ಒಂದು ಹೆಜ್ಜೆಯಾಗಿದೆ. ಇದು ಹೆಚ್ಚಿನ ಉದ್ಯೋಗಗಳನ್ನು ಸೃಷ್ಟಿಸುವಲ್ಲಿ ಮತ್ತು ಯುವಕರಿಗೆ ಅರ್ಥಪೂರ್ಣ ಅವಕಾಶಗಳನ್ನು ಒದಗಿಸುವಲ್ಲಿ ಪೂರಕವಾಗಲಿದೆ ಎಂದು ನಿರೀಕ್ಷಿಸಲಾಗಿದೆ ಎಂದು ಪ್ರಧಾನ ಮಂತ್ರಿ ಕಾರ್ಯಾಲಯ ತಿಳಿಸಿದೆ.

ಪ್ರಧಾನಮಂತ್ರಿ ಕಾರ್ಯಾಲಯ ತಿಳಿಸಿರುವ ಮಾಹಿತಿ ಪ್ರಕಾರ, ಮಾದರಿ ನೀತಿ ಸಂಹಿತೆ ಜಾರಿಯಲ್ಲಿರುವ ಗುಜರಾತ್ ಮತ್ತು ಹಿಮಾಚಲ ಪ್ರದೇಶದಲ್ಲಿ ಈ ಕಾರ್ಯಕ್ರಮ ಇರುವುದಿಲ್ಲ. ಇದಲ್ಲದೆ ಈ ಕಾರ್ಯಕ್ರಮವು ಭಾರತದಾದ್ಯಂತ 45 ಸ್ಥಳಗಳಲ್ಲಿ ನಡೆಯಲಿದ್ದು, ಅಲ್ಲಿ ನೇಮಕಾತಿ ಪತ್ರಗಳಿಗೆ ಸಂಬಂಧಿಸಿದ ಪ್ರತಿಗಳನ್ನು ಹೊಸ ನೇಮಕಾತಿದಾರರಿಗೆ ವಿತರಿಸಲಾಗುವುದು ಎಂದು ತಿಳಿಸಿದೆ.

Related Articles

ಇತ್ತೀಚಿನ ಸುದ್ದಿಗಳು

You cannot copy content of this page