ಬೆಂಗಳೂರು : ಇಂದು ಸರ್ದಾರ್ ಪಟೇಲ್ (sardar vallabhbhai patel) ಅವರ ಜನ್ಮ ದಿನಾಚರಣೆಯಾಗಿದ್ದು, ದೇಶಾದ್ಯಂತ ರಾಷ್ಟ್ರೀಯ ಏಕತಾ ದಿವಸ್ ಎಂದು ಆಚರಿಸಲಾಗುತ್ತದೆ. ಈ ಸಂದರ್ಭದಲ್ಲಿ ದೇಶದಲ್ಲಿ ರಾಷ್ಟ್ರೀಯ ಸ್ವಯಂಸೇವಕ ಸಂಘ (RSS) ಅನ್ನು ನಿಷೇಧಿಸಬೇಕು ಎಂದು ಮಲ್ಲಿಕಾರ್ಜುನ ಖರ್ಗೆ (Mallikarjuna Kharge) ಪುನರುಚ್ಚರಿಸಿದ್ದಾರೆ. ಸರ್ದಾರ್ ವಲ್ಲಭಭಾಯಿ ಪಟೇಲ್ ಅವರು ಕೂಡ ಸರ್ಕಾರಿ ನೌಕರರು ಆರ್‌ಎಸ್‌ಎಸ್ ಚಟುವಟಿಕೆಗಳಲ್ಲಿ ಭಾಗವಹಿಸುವುದನ್ನು ನಿಷೇಧಿಸಿದ್ದರು ಎಂದು ಹೇಳಿದ್ದಾರೆ. ಇದು ಬಿಜೆಪಿ ನಾಯಕರ ಆಕ್ರೋಶಕ್ಕೆ ಕಾರಣವಾಗಿದೆ.ರಾಜ್ಯದಲ್ಲಿ ಸಚಿವ ಪ್ರಿಯಾಂಕ್ ಖರ್ಗೆ ನಿರಂತರವಾಗಿ ಆರ್.ಎಸ್.ಎಸ್ ವಿರುದ್ಧ ವಾಗ್ದಾಳಿ ನಡೆಸಿರುವ ಬೆನ್ನಲ್ಲೇ 2024 ರಲ್ಲಿ ಬಿಜೆಪಿ ಸರ್ಕಾರ ನಿಷೇಧವನ್ನು ತೆಗೆದುಹಾಕಿತ್ತು.ಆದ್ರೆ ಇದೀಗ ಮತ್ತೆ ಆರ್.ಎಸ್.ಎಸ್ ಮೇಲೆ ನಿಷೇಧ ಹೇರಬೇಕಿದೆ. ಆರ್‌ಎಸ್‌ಎಸ್ ಅನ್ನು ನಿಷೇಧಿಸಬೇಕು ಎಂಬುದು ನನ್ನ ವೈಯಕ್ತಿಕ ಅಭಿಪ್ರಾಯ ಎಂದು ಖರ್ಗೆ ಹೇಳಿದ್ದಾರೆ.
ಸರ್ಕಾರಿ ಸೇವೆಯಲ್ಲಿರುವ ವ್ಯಕ್ತಿ ಆರ್‌ಎಸ್‌ಎಸ್‌ಗಾಗಿ ಕೆಲಸ ಮಾಡಬಾರದು ಎಂದು ಸರ್ದಾರ್ ಪಟೇಲ್ ಕೂಡ ಹೇಳಿದ್ದರು. ಅವರು ಸರ್ಕಾರಿ ನೌಕರರು ಆರ್‌ಎಸ್‌ಎಸ್ ಮತ್ತು ಜಮಾತೆ ಇಸ್ಲಾಮಿಯ ಚಟುವಟಿಕೆಗಳಲ್ಲಿ ಭಾಗವಹಿಸುವುದನ್ನು ನಿಷೇಧಿಸಿದ್ದರು. ಆದ್ರೆ ಮೋದಿ ಸರ್ಕಾರ ಜುಲೈ 9, 2024 ರಂದು ಈ ನಿಷೇಧವನ್ನು ತೆಗೆದುಹಾಕಿದೆ. ಈ ನಿಷೇಧವನ್ನು ಪುನಃ ಜಾರಿಗೆ ತರಬೇಕೆಂದು ನಾವು ಒತ್ತಾಯಿಸುತ್ತೇವೆ ಎಂದು ಖರ್ಗೆ ಹೇಳಿದ್ದಾರೆ.ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಈ ಹೇಳಿಕೆಯ ವಿರುದ್ಧ ಬಿಜೆಪಿ ಆಕ್ರೋಶ ವ್ಯಕ್ತಪಡಿಸಿದ್ದು, ಕಾಂಗ್ರೆಸ್ ಪಕ್ಷ 50 ವರ್ಷಗಳಿಗೂ ಹೆಚ್ಚು ಕಾಲ ಪಟೇಲ್ ಅವರನ್ನು ನಿರ್ಲಕ್ಷಿಸಿದೆ ಮತ್ತು ಅವರ ಕೊಡುಗೆಗಳನ್ನು ಮರೆತಿದೆ. ಈಗೆ ಹೇಗೆ ನೆನಪಾದರು ಎಂದು ಟೀಕಿಸಿದೆ. ಕಾಂಗ್ರೆಸ್ ಪಕ್ಷ ಎಂದಿಗೂ ಪಟೇಲ್ ಅವರ ಹೆಜ್ಜೆಗಳನ್ನು ಅನುಸರಿಸಲಿಲ್ಲ ಮತ್ತು ಈಗ ಆರ್‌ಎಸ್‌ಎಸ್ ಅನ್ನು ವಿರೋಧಿಸಲು ಅವರ ಹೆಸರನ್ನು ಬಳಸುತ್ತಿದ್ದಾರೆ ಎಂದು ಬಿಜೆಪಿ ವಕ್ತಾರ ಶೆಹಜಾದ್ ಪೂನಾವಾಲಾ ಪ್ರತಿಪಾದಿಸಿದ್ದಾರೆ.
