Home ಬೆಂಗಳೂರು ಫುಟ್‌ಪಾತ್‌ ಮೇಲೆ ಇನ್ಮುಂದೆ ವಾಹನ ಚಲಾಯಿಸಿದ್ರೆ – 5 ಸಾವಿರ ದಂಡ

ಫುಟ್‌ಪಾತ್‌ ಮೇಲೆ ಇನ್ಮುಂದೆ ವಾಹನ ಚಲಾಯಿಸಿದ್ರೆ – 5 ಸಾವಿರ ದಂಡ

ಬೆಂಗಳೂರು : ಫುಟ್‌ಪಾತ್‌ ಮೇಲೆ ವಾಹನ ಚಲಾಯಿಸುವ ಸವಾರರಿಗೆ (Footpath Fine) ಇನ್ಮುಂದೆ ಭಾರಿ ದಂಡ ಬೀಳುವ ಸಾಧ್ಯತೆ ಇದೆ. ನಿಯಮ ಉಲ್ಲಂಘಿಸುವವರಿಗೆ (Traffic Rules) ಈಗಿರುವ ದಂಡಕ್ಕಿಂತ ಹಲವು ಪಟ್ಟು ಹೆಚ್ಚಿಸಲು ಸಾರಿಗೆ ಇಲಾಖೆ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದೆ.

ಸದ್ಯ ಫುಟ್‌ಪಾತ್‌ ಮೇಲೆ ವಾಹನ ಚಲಾಯಿಸಿದರೆ 500 ರೂ. ದಂಡ ವಿಧಿಸಲಾಗುತ್ತಿದೆ. ಆದರೆ ಮುಂಬರುವ ದಿನಗಳಲ್ಲಿ ಮೊದಲ ಬಾರಿ ಈ ನಿಯಮ ಉಲ್ಲಂಘನೆ ಮಾಡಿದವರಿಗೆ 5,000 ರೂ. ಹೆಚ್ಚಿಸುವಂತೆ ಸಾರಿಗೆ ಇಲಾಖೆ ಪ್ರಸ್ತಾವನೆ ನೀಡಿದೆ.

ಇದೇ ನಿಯಮವನ್ನು ಎರಡನೇ ಬಾರಿ ಉಲ್ಲಂಘಿಸಿದರೆ 10,000 ರೂ. ದಂಡ ವಿಧಿಸುವಂತೆ ಪ್ರಸ್ತಾವನೆಯಲ್ಲಿ ತಿಳಿಸಲಾಗಿದೆ. ಯಾವುದೇ ರೀತಿಯ ವಾಹನವನ್ನು ಫುಟ್‌ಪಾತ್‌ ಮೇಲೆ ಚಲಾಯಿಸಿದರೂ ಈ ದಂಡ ಅನ್ವಯಿಸುವ ಸಾಧ್ಯತೆ ಇದೆ.

ಬೆಂಗಳೂರಿನ ಹಲವು ಭಾಗಗಳಲ್ಲಿ ಫುಟ್‌ಪಾತ್‌ ಮೇಲೆ ವಾಹನಗಳ ಸಂಚಾರ ಹೆಚ್ಚಾಗಿದೆ. ಇದರಿಂದ ಪಾದಚಾರಿಗಳು ರಸ್ತೆಗೆ ಇಳಿದು ಓಡಾಡುವ ಪರಿಸ್ಥಿತಿ ನಿರ್ಮಾಣವಾಗಿದ್ದು, ಅಪಘಾತದ ಆತಂಕವೂ ಎದುರಾಗಿದೆ. ಈ ಹಿನ್ನೆಲೆಯಲ್ಲಿ ನಿಯಮ ಉಲ್ಲಂಘಿಸುವ ವಾಹನ ಸವಾರರಿಗೆ ದಂಡ ಹೆಚ್ಚಿಸುವ ಪ್ರಸ್ತಾವನೆ ಮಾಡಲಾಗಿದೆ.

You cannot copy content of this page

Exit mobile version