ದೆಹಲಿ: ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಮೇಲೆ ನಿಷೇಧ ಹೇರಬೇಕು ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತೊಮ್ಮೆ ಆಗ್ರಹಿಸಿದ್ದಾರೆ.
ದೇಶದಲ್ಲಿ ಪ್ರಸ್ತುತ ಹದಗೆಟ್ಟಿರುವ ಕಾನೂನು ಮತ್ತು ಸುವ್ಯವಸ್ಥೆ ಪರಿಸ್ಥಿತಿಗೆ ಬಿಜೆಪಿ ಮತ್ತು ಆರ್‌ಎಸ್‌ಎಸ್ ಕಾರಣ ಎಂದು ಆರೋಪಿಸಿದ ಅವರು, ಪ್ರಧಾನಿ ಮೋದಿ ಅವರು ನಿಜವಾಗಿಯೂ ಸರ್ದಾರ್ ವಲ್ಲಭಭಾಯಿ ಪಟೇಲ್ ಅವರ ಆಶಯಗಳನ್ನು ಗೌರವಿಸುವುದಾದರೆ, ತಕ್ಷಣವೇ ಆರ್‌ಎಸ್‌ಎಸ್ ಅನ್ನು ನಿಷೇಧಿಸಬೇಕು ಎಂದು ಒತ್ತಾಯಿಸಿದರು.
ಗಾಂಧೀಜಿಯವರ ಮರಣದ ನಂತರ ಆರ್‌ಎಸ್‌ಎಸ್ ಹೇಗೆ ಸಂತೋಷ ವ್ಯಕ್ತಪಡಿಸಿತ್ತು ಎಂಬುದನ್ನು ವಿವರಿಸಿದ ಖರ್ಗೆ, ಆರ್‌ಎಸ್‌ಎಸ್ ಅನ್ನು ನಿಷೇಧಿಸುವುದು ಅನಿವಾರ್ಯವಾಗಿದೆ ಎಂದು ಅಂದಿನ ಗೃಹ ಸಚಿವ ಸರ್ದಾರ್ ಪಟೇಲ್ ಅವರು ಶ್ಯಾಮ್ ಪ್ರಸಾದ್ ಮುಖರ್ಜಿಗೆ ಬರೆದ ಪತ್ರವನ್ನು ಈ ಸಂದರ್ಭದಲ್ಲಿ ನೆನಪಿಸಿದರು.
