ಆನ್‌ಲೈನ್ ಬುಕ್ಕಿಂಗ್ ಭಕ್ತರಿಗೆ ಮಾತ್ರ ಶಬರಿಮಲೆಗೆ ಅವಕಾಶ ನೀಡಲು ಕೇರಳ ಸರ್ಕಾರ ನಿರ್ಧಾರ

ತಿರುವನಂತಪುರಂ, ಅಕ್ಟೋಬರ್ 5: ಶಬರಿಮಲೆಗೆ ಆನ್‌ಲೈನ್ ಬುಕ್ಕಿಂಗ್ ಮಾಡಿದ ಭಕ್ತರಿಗೆ ಮಾತ್ರ ಅವಕಾಶ ನೀಡಲು ಕೇರಳ ಸರ್ಕಾರ ನಿರ್ಧರಿಸಿದೆ.

ಮುಂದಿನ ತಿಂಗಳಿನಿಂದ ಶಬರಿಮಲೆಯಲ್ಲಿ (Sabarimala) ವಾರ್ಷಿಕ ಮಂಡಲ-ಮಕರವಿಳಕ್ಕು ಯಾತ್ರೆ ಆರಂಭವಾಗುವ ಹಿನ್ನೆಲೆಯಲ್ಲಿ ಶನಿವಾರ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅಧ್ಯಕ್ಷತೆಯಲ್ಲಿ ಸಭೆ ನಡೆಯಿತು.

ಶಬರಿಮಲೆಗೆ ಬರುವ ಅಯ್ಯಪ್ಪ ಭಕ್ತರು ಮೊದಲು ಆನ್‌ಲೈನ್‌ನಲ್ಲಿ ಬುಕ್ ಮಾಡಬೇಕು ಎಂದು ಸಿಎಂಒ ಪ್ರಕಟಣೆಯಲ್ಲಿ ತಿಳಿಸಿದೆ. ಪ್ರತಿದಿನ 80 ಸಾವಿರ ಭಕ್ತರಿಗೆ ದರ್ಶನ ನೀಡಲು ವ್ಯವಸ್ಥೆ ಮಾಡಲಾಗುತ್ತಿದೆ.

Related Articles

ಇತ್ತೀಚಿನ ಸುದ್ದಿಗಳು