Monday, May 5, 2025

ಸತ್ಯ | ನ್ಯಾಯ |ಧರ್ಮ

ಕಾಫಿ ನಾಡು ಚಿಕ್ಕಮಗಳೂರು ಜಿಲ್ಲೆಯಾದ್ಯಂತ 144 ಸೆಕ್ಷನ್ ಜಾರಿ; ‘ಕೇಸರಿ’ ಕಾಲಾಳುಗಳು ಪೊಲೀಸರ ವಶಕ್ಕೆ

ಮಂಗಳೂರಿನ ಕುಡುಪು ಬಳಿ ರೌಡಿ ಶೀಟರ್ ಸುಹಾಸ್ ಶೆಟ್ಟಿ ಕೊಲೆ ಹಿನ್ನೆಲೆಯಲ್ಲಿ ಚಿಕ್ಕಮಗಳೂರು ಜಿಲ್ಲೆಯಾದ್ಯಂತ ಹಿಂದುತ್ವ ಸಂಘಟನೆಗಳು ಬಂದ್ ಗೆ ಕರೆ ನೀಡಿದ ಹಿನ್ನೆಲೆಯಲ್ಲಿ, ಹಿಂಸಾಚಾರ ನಿಯಂತ್ರಿಸಲು ಪೊಲೀಸ್ ಇಲಾಖೆ 144 ಸೆಕ್ಷನ್ ಜಾರಿ ಮಾಡಿದೆ. ಈ ನಡುವೆ ಗಲಾಟೆ ಮಾಡಲು ಯತ್ನಿಸಿದ ಭಜರಂಗದಳ ಮತ್ತು ವಿಹೆಚ್ ಪಿ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಬಂದ್ ಗೆ ಜಿಲ್ಲಾಡಳಿತ ಅನುಮತಿ ನೀಡಿಲ್ಲವಾಗಿದ್ದು ಈ ನಡುವೆ ಜಿಲ್ಲಾಡಳಿತದ ವಿರೋಧದ ನಡುವೆ ಓಂಕಾರೇಶ್ವರ ದೇವಸ್ಥಾನದಿಂದ ಹನುಮಂತಪ್ಪ ವೃತ್ತದವರೆಗೂ ಹಿಂದೂ ಕಾರ್ಯಕರ್ತರು ಮೆರವಣಿಗೆ ನಡೆಸಿದ್ದು ಈ ವೇಳೆ ಸುಮಾರು 20ಕ್ಕೂ ಹೆಚ್ಚು ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.

ಜಿಲ್ಲೆಯ ಬಹುತೇಕ ಕಡೆ ವಾಹನ ಸಂಚಾರ ಸಾಮಾನ್ಯವಾಗಿದ್ದು, ಚಿಕ್ಕಮಗಳೂರು ನಗರ ಸೇರಿದಂತೆ 9 ತಾಲೂಕಿನಲ್ಲಿ ಬಂದ್​ ಮಾಡಲು ನಿರ್ಧರಿಸಲಾಗಿದೆ. ಸ್ವಯಂ ಘೋಷಿತರಾಗಿ ಅಂಗಡಿ ಮುಂಗಟ್ಟು ಬಂದ್​ ಮಾಡುವಂತೆ ಹಿಂದೂ ಸಂಘಟನೆಗಳು ಮನವಿ ಮಾಡಿದ್ದವು. ಆದರೆ ಬಂದ್ ಗೆ ಜಿಲ್ಲಾ ಕೇಂದ್ರ ಹೊರತುಪಡಿಸಿ ಬಹುತೇಕ ತಾಲ್ಲೂಕುಗಳಲ್ಲಿ ನೀರಸ ಪ್ರತಿಕ್ರಿಯೆ ವ್ಯಕ್ತವಾಗಿದೆ.

ದಕ್ಷಿಣ ಕನ್ನಡದಿಂದ ಬರುವ ಪ್ರತಿ ವಾಹನಗಳ ಮೇಲೆ ಪೊಲೀಸರು ಕಣ್ಣಿಟ್ಟಿದ್ದು, ತೀವ್ರ ತಪಾಸಣೆಗೆ ಒಳಪಡಿಸಿ ಚಿಕ್ಕಮಗಳೂರು ಜಿಲ್ಲೆಯ ಒಳಗೆ ಬಿಡಲಾಗುತ್ತಿದೆ.

Related Articles

ಇತ್ತೀಚಿನ ಸುದ್ದಿಗಳು

You cannot copy content of this page