ಬೆಂಗಳೂರು, ಆಗಸ್ಟ್ 20: ಕನ್ನಡದ ಬರಹಗಾರರು ಆಸಕ್ತಿಯಿಂದ ಕಾಯುವ ಕರ್ನಾಟಕ ಸಾಹಿತ್ಯ ಅಕಾಡೆಮಿ ಪ್ರಶಸ್ತಿಗಳಿಗಾಗಿ ಕರ್ನಾಟಕ ಸಾಹಿತ್ಯ ಅಕಾಡೆಮಿ ಸಂಸ್ಥೆಯು ವಿವಿಧ ಬಗೆಯ ಬರಹಗಾರರಿಂದ ಪುಸ್ತಕಗಳನ್ನು ಆಹ್ವಾನಿಸಿದೆ. ಆಸಕ್ತರು ಗಮನಿಸಬಹುದು.
ಕರ್ನಾಟಕ ಸಾಹಿತ್ಯ ಅಕಾಡೆಮಿಯು 2023 ನೇ ವರ್ಷದಲ್ಲಿ ಪ್ರಥಮ ಮುದ್ರಣವಾಗಿ ಪ್ರಕಟಗೊಂಡಿರುವ ಸಾಹಿತ್ಯದ ವಿವಿಧ ಪ್ರಕಾರಗಳ ಕೃತಿಗಳನ್ನು ಬಹುಮಾನಕ್ಕಾಗಿ ಆಹ್ವಾನಿಸಲಾಗಿದೆ.
ಆಸಕ್ತ ಲೇಖಕರು, ಪ್ರಕಾಶಕರು, ಸಾಹಿತ್ಯಾಸಕ್ತ ಸಾರ್ವಜನಿಕರು ನಾಲ್ಕು ಪ್ರತಿಗಳನ್ನು ರಿಜಿಸ್ಟ್ರಾರ್, ಕರ್ನಾಟಕ ಸಾಹಿತ್ಯ ಅಕಾಡೆಮಿ, ಕನ್ನಡ ಭವನ, ಜೆ.ಸಿ.ರಸ್ತೆ, ಬೆಂಗಳೂರು-560002. ಈ ವಿಳಾಸಕ್ಕೆ ರಿಜಿಸ್ಟರ್ ಅಂಚೆ, ಕೊರಿಯರ್ ಮೂಲಕ ಅಥವಾ ಖುದ್ದಾಗಿ 2024ರ ಆಗಸ್ಟ್ 31 ರೊಳಗೆ ತಲುಪುವಂತೆ ಕಳುಹಿಸಬೇಕು.
ಹೆಚ್ಚಿನ ಮಾಹಿತಿಗಾಗಿ ಅಕಾಡೆಮಿಯ ವೆಬ್‍ಸೈಟ್ www.sahithyaacademy.karnataka.gov.in ಗೆ ಭೇಟಿ ನೀಡಬಹುದು ಎಂದು ಕರ್ನಾಟಕ ಸಾಹಿತ್ಯ ಅಕಾಡೆಮಿಯ ರಿಜಿಸ್ಟ್ರಾರ್ ಕರಿಯಪ್ಪ ಎನ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.