ನ್ಯೂಯಾರ್ಕ್: ಲೇಖಕ ಸಲ್ಮಾನ್ ರಶ್ದಿ ಅವರ ಕುತ್ತಿಗೆಗೆ ಮತ್ತು ಹೊಟ್ಟೆಗೆ ಚಾಕು ಇರಿದು ಹತ್ಯೆಗೆ ಪ್ರಯತ್ನಿಸಿರುವ ಘಟನೆ ಅಮೇರಿಕಾದ ನ್ಯೂಯಾರ್ಕ್ ನಗರದಲ್ಲಿ ನಡೆದಿದೆ.
ಶುಕ್ರವಾರ ನಗರದಲ್ಲಿ ನಡೆದ ಸಾಹಿತ್ಯ ಕಾರ್ಯಕ್ರಮವೊಂದರಲ್ಲಿ 75 ವರ್ಷ ವಯಸ್ಸಿನ ಸಲ್ಮಾನ್ ರಶ್ದಿ ಮಾತನಾಡುವ ವೇಳೆ ಚಾಕುವಿನಿಂದ ಇರಿದು ಹತ್ಯೆಗೆ ಪ್ರಯತ್ನಿಸಿದ್ದು, ಗಾಯಗೊಂಡ ರಶ್ದಿ ಅವರು ವೆಂಟಿಲೇಟರ್‌ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಲೇಖಕರನ್ನು ಹಲ್ಲೆ ಮಾಡಿದ ಕೆಲವೇ ಕ್ಷಣಗಳಲ್ಲಿ ಅಧಿಕಾರಿಗಳು ಹದಿ ಮತರ್(24) ಎಂಬ ಹಲ್ಲೆಕೋರನನ್ನು ಬಂಧಿಸಿದ್ದಾರೆ ಎಂದು ಇಂಡಿಯಾ ಟುಡೇ ವರದಿ ಮಾಡಿದೆ.