Thursday, September 4, 2025

ಸತ್ಯ | ನ್ಯಾಯ |ಧರ್ಮ

ಧರ್ಮಸ್ಥಳ ಪ್ರಕರಣ: ಕೇಂದ್ರದ ಕದ ತಟ್ಟಿದ ಸನಾತನಿ ಸ್ವಾಮಿಗಳ ನಿಯೋಗ; NIA ತನಿಖೆಗೆ ಒತ್ತಾಯ

ಧರ್ಮಸ್ಥಳ ಸರಣಿ ಅಂತ್ಯಕ್ರಿಯೆ ಪ್ರಕರಣ ಸೇರಿದಂತೆ ಹಲವು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ನಡೆಸುತ್ತಿರುವ SIT ತನಿಖೆ ನಡೆಯುತ್ತಿರುವ ಹಂತದಲ್ಲೇ ಕರ್ನಾಟಕದಿಂದ ಹಲವು ಸನಾತನ ಮಠಗಳ ಸ್ವಾಮಿಗಳ ನಿಯೋಗ ಪ್ರಕರಣದ ಅಡಿಯಲ್ಲಿ ಮಧ್ಯೆ ಪ್ರವೇಶಿಸಲು ಕೇಂದ್ರ ಸರ್ಕಾರದ ಕದ ತಟ್ಟಿದೆ.

ಈ ಬಗ್ಗೆ ಪ್ರತಿಕ್ರಿಯಿಸಿರುವ ಕೇಂದ್ರ ಗೃಹ ಸಚಿವ ಅಮಿತ್ ಷಾ, ‘ಧರ್ಮಸ್ಥಳದಲ್ಲಿ ನಡೆಯುತ್ತಿರುವ ಬೆಳವಣಿಗೆಗಳನ್ನು ನಾನೇ ಖುದ್ದಾಗಿ ಸೂಕ್ಷ್ಮವಾಗಿ ಗಮನಿಸುತ್ತಿದ್ದೇನೆ. ಈ ಬಗ್ಗೆ ಕೇಂದ್ರ ಸಚಿವ ಸಂಪುಟ ನೇತೃತ್ವದಲ್ಲಿ ಸಭೆ ನಡೆಸುತ್ತೇವೆ. ಬಳಿಕ ಮುಂದಿನ ನಿರ್ಧಾರ ಕೈಗೊಳ್ಳುತ್ತೇವೆ’ ಎಂದು ಹೇಳಿದ್ದಾರೆ.

ಧರ್ಮಸ್ಥಳದ ಸರಣಿ ಅಂತ್ಯಕ್ರಿಯೆ ಪ್ರಕರಣ, ಸೌಜನ್ಯ ಸಾವಿನ ಪ್ರಕರಣ ಸೇರಿದಂತೆ ಎಲ್ಲ ಪ್ರಕರಣಗಳ ತನಿಖೆಯನ್ನು ರಾಷ್ಟ್ರೀಯ ತನಿಖಾ ದಳಕ್ಕೆ (NIA) ವಹಿಸಬೇಕೆಂಬ ಆಗ್ರಹ ಹೆಚ್ಚಾದ ಬೆನ್ನಲ್ಲೇ, ಪಂಚಮಸಾಲಿ ಪೀಠದ ವಚನಾನಂದ ಸ್ವಾಮೀಜಿ, ಮಂಗಳೂರಿನ ಗುರುಪುರ ವಜ್ರದೇಹಿ ಮಠದ ಶ್ರೀ ರಾಜಶೇಖರಾನಂದ ಸ್ವಾಮೀಜಿ ನೇತೃತ್ವದ ಸನಾತನ ಸ್ವಾಮಿಗಳ ನಿಯೋಗ ನವದೆಹಲಿಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿ ಮಾಡಿದೆ.

ಈಗಾಗಲೇ ರಾಜ್ಯ ಸರ್ಕಾರ ನೇಮಿಸಿರುವ ಎಸ್ಐಟಿ ತನಿಖೆ ತನಿಖೆ ಹಂತದಲ್ಲಿರುವಾಗಲೇ ಬಿಜೆಪಿ ಪಕ್ಷ ಮತ್ತು ಆರೋಪಿಗಳ ಪರವಾಗಿ ನಿಂತವರು ನೇರವಾಗಿ ಎನ್ಐಎ ತನಿಖೆಗೆ ವಹಿಸುವಂತೆ ಒತ್ತಾಯಿಸಿವೆ. ಇದರ ಬೆನ್ನಲ್ಲೇ ಕರ್ನಾಟಕದ ಸನಾತನಿ ಸ್ವಾಮಿಗಳ ನಿಯೋಗ ಇಂದು ಅಮಿತ್ ಷಾ ಭೇಟಿ ಮಾಡಿ NIA ಗೆ ತನಿಖೆ ಜವಾಬ್ದಾರಿ ನೀಡಬೇಕು ಎಂದು ಮನವಿ ಸಲ್ಲಿಸಿದೆ.

ಧರ್ಮ ಕ್ಷೇತ್ರಗಳ ವಿರುದ್ಧದ ಅಪಪ್ರಚಾರಕ್ಕೆ ಕಡಿವಾಣ ಹಾಕಲು ಹೊಸ ಕಾನೂನು ತರುತ್ತೇವೆ. ನೀವು ಸಮಾಜವನ್ನ ಜಾಗೃತಿಗೊಳಿಸಿ ಎಂದು ಸ್ವಾಮೀಜಿಗಳ ಬಳಿ ಗೃಹ ಸಚಿವ ಅಮಿತ್ ಶಾ ತಿಳಿಸಿದ್ದಾರೆ. ಸ್ವಾಮೀಜಿಗಳಿಂದ ಸುಮಾರು ಒಂದು ಗಂಟೆಗಳ ಕಾಲ ಮಾಹಿತಿ ಪಡೆದ ನಂತರ ಅಮಿತ್ ಶಾ ಈ ಪ್ರತಿಕ್ರಿಯೆ ನೀಡಿದರು.

Related Articles

ಇತ್ತೀಚಿನ ಸುದ್ದಿಗಳು

You cannot copy content of this page