Monday, November 11, 2024

ಸತ್ಯ | ನ್ಯಾಯ |ಧರ್ಮ

ಸು.ಕೋರ್ಟ್‌ ಮುಖ್ಯ ನ್ಯಾಯಮೂರ್ತಿಯಾಗಿ ಸಂಜೀವ್ ಖನ್ನಾ ಅಧಿಕಾರ ಸ್ವೀಕಾರ

ನಿವೃತ್ತ ನ್ಯಾಯಮೂರ್ತಿ ಜ.ಚಂದ್ರಚೂಡ್ ಅವರ ನಿವೃತ್ತಿಯ ನಂತರ ಸುಪ್ರೀಂಕೋರ್ಟ್ ನ 51ನೇ ಮುಖ್ಯ ನ್ಯಾಯಮೂರ್ತಿಯಾಗಿ ಸಂಜೀವ್ ಖನ್ನಾ ಇಂದು ಪ್ರಮಾಣ ವಚನ ಸ್ವೀಕರಿಸಿದರು.

ರಾಷ್ಟ್ರಪತಿಗಳು ಅವರಿಗೆ ಪ್ರಮಾಣ ವಚನ ಭೋದಿಸಿದರು. ನವೆಂಬರ್ 10 ರಂದು ತಮ್ಮ 65 ನೇ ವಯಸ್ಸಿನಲ್ಲಿ ಹುದ್ದೆಯಿಂದ ನಿವೃತ್ತರಾದ ನ್ಯಾಯಮೂರ್ತಿ ಚಂದ್ರಚೂಡ್ ಅವರು ನ್ಯಾಯಮೂರ್ತಿ ಖನ್ನಾ ಅವರ ಹೆಸರನ್ನು ಶಿಫಾರಸು ಮಾಡಿದ್ದರು. ಅವರು ಮುಂದಿನ ವರ್ಷ ಮೇ 13 ರವರೆಗೆ ಮುಖ್ಯ ನ್ಯಾಯಮೂರ್ತಿಯಾಗಿ ಸೇವೆ ಸಲ್ಲಿಸಲಿದ್ದಾರೆ.

ಮೇ 14, 1960 ರಂದು ಜನಿಸಿದ ನ್ಯಾಯಮೂರ್ತಿ ಸಂಜೀವ್ ಖನ್ನಾ ಅವರು ದೆಹಲಿ ವಿಶ್ವವಿದ್ಯಾಲಯದ ಕ್ಯಾಂಪಸ್ ಕಾನೂನು ಕೇಂದ್ರದಲ್ಲಿ ಕಾನೂನು ಅಧ್ಯಯನ ಮಾಡಿದರು. ದೆಹಲಿ ಹೈಕೋರ್ಟಿನ ನ್ಯಾಯಾಧೀಶರಾಗಿ ನೇಮಕಗೊಳ್ಳುವ ಮೊದಲು ಅವರು ಮೂರನೇ ತಲೆಮಾರಿನ ವಕೀಲರಾಗಿದ್ದರು. ಅವರು ರಾಷ್ಟ್ರೀಯ ಕಾನೂನು ಸೇವಾ ಪ್ರಾಧಿಕಾರದ (ನಲ್ಸಾ) ಕಾರ್ಯನಿರ್ವಾಹಕ ಅಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದರು. ನ್ಯಾಯಮೂರ್ತಿ ಖನ್ನಾ ಅವರನ್ನು 2019 ರ ಜನವರಿಯಲ್ಲಿ ಸುಪ್ರೀಂ ಕೋರ್ಟ್ಗೆ ನೇಮಿಸಲಾಯಿತು.

ಅವರು ಉನ್ನತ ನ್ಯಾಯಾಲಯದ ನ್ಯಾಯಾಧೀಶರಾಗಿದ್ದ ಅವಧಿಯಲ್ಲಿ, ಮದ್ಯ ನೀತಿ ಪ್ರಕರಣದಲ್ಲಿ ಆಮ್ ಆದ್ಮಿ ಪಕ್ಷದ (ಎಎಪಿ) ಮುಖಂಡ ಮತ್ತು ದೆಹಲಿಯ ಮಾಜಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ಜಾಮೀನು ಅರ್ಜಿಗಳ ವಿಚಾರಣೆ ಸೇರಿದಂತೆ ಹಲವಾರು ರಾಜಕೀಯ ಸೂಕ್ಷ್ಮ ಪ್ರಕರಣಗಳ ನ್ಯಾಯಪೀಠಗಳ ನೇತೃತ್ವ ವಹಿಸಿದ್ದರು.

Related Articles

ಇತ್ತೀಚಿನ ಸುದ್ದಿಗಳು

You cannot copy content of this page