ಸಂತೋಷ್ ಎಸ್. ಲಾಡ್ ಅವರಿಗೆ ಸಚಿವ ಸ್ಥಾನ ನೀಡಿ – ಅಭಿಮಾನಿಗಳ ಒತ್ತಾಯ

ಹಾಸನ: ಬುದ್ಧ, ಬಸವ ಹಾಗೂ ಅಂಬೇಡ್ಕರ್ ತತ್ವಗಳನ್ನು ಅನುಸರಿಸುವ ಜನನಾಯಕ, ಬಡವರ ಬಂಧು ಹಾಗೂ ನಿಕಟಪೂರ್ವ ಕಾರ್ಮಿಕ ಸಚಿವರಾದ ಸಂತೋಷ್ ಎಸ್. ಲಾಡ್ ಅವರಿಗೆ ರಾಜ್ಯ ಸಚಿವ ಸಂಪುಟದಲ್ಲಿ ಮಹತ್ವದ ಸ್ಥಾನ ನೀಡಬೇಕೆಂದು ಸಂತೋಷ್ ಲಾಡ್ ಅಭಿಮಾನಿಗಳ ಬಳಗದ ವಿನೋದ್ ಕುಮಾರ್ ಅವರು ಒತ್ತಾಯಿಸಿದರು.
ನಗರದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅಭಿಮಾನಿಗಳ ಬಳಗದ ಮುಖಂಡರು, 2023ರಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ಕಾರ್ಮಿಕ ಸಚಿವರಾಗಿ ಕಾರ್ಯನಿರ್ವಹಿಸಿದ ಸಂತೋಷ್ ಲಾಡ್ ಅವರು ಕಾರ್ಮಿಕರ ಕಲ್ಯಾಣಕ್ಕಾಗಿ ಹಲವು ಐತಿಹಾಸಿಕ ಕ್ರಮಗಳನ್ನು ಜಾರಿಗೆ ತಂದಿದ್ದಾರೆ ಎಂದು ತಿಳಿಸಿದರು.

ಮಹಿಳಾ ಕಾರ್ಮಿಕರಿಗಾಗಿ ಋತುಚಕ್ರ ರಜೆ, ಕಾರ್ಮಿಕರಿಗೆ ಅಪಘಾತ ವಿಮೆ, ವೇತನ ಹೆಚ್ಚಳ, ಕಾರ್ಮಿಕ ಸ್ಮಾರ್ಟ್ ಕಾರ್ಡ್ ಯೋಜನೆ, ನಿರಾಶ್ರಿತ ಹಾಗೂ ವಿಧವಾ ಅಸಂಘಟಿತ ಮಹಿಳಾ ಕಾರ್ಮಿಕರ ಕೌಶಲ್ಯಾಭಿವೃದ್ಧಿ ಕಾರ್ಯಕ್ರಮ ಸೇರಿದಂತೆ ಹಲವು ಜನಪರ ಯೋಜನೆಗಳನ್ನು ಜಾರಿಗೆ ತಂದಿರುವುದು ಅವರ ವಿಶೇಷ ಸಾಧನೆಯಾಗಿದೆ ಎಂದು ಹೇಳಿದರು.

Related Articles

ಇತ್ತೀಚಿನ ಸುದ್ದಿಗಳು