Monday, July 28, 2025

ಸತ್ಯ | ನ್ಯಾಯ |ಧರ್ಮ

ಕರ್ನಾಟಕದಲ್ಲಿನ ಬಿಜೆಪಿ ನಿಲುವು ಕುರಿತು ಸಾಮಾಜಿಕ ಜಾಲತಾಣದಲ್ಲಿ ವ್ಯಂಗ್ಯ

ಬೆಂಗಳೂರು: ಸಾಮಾಜಿಕ ಜಾಲಾತಾಣದಲ್ಲಿ ಕರ್ನಾಟಕ ಭಾರತೀಯ ಜನತಾ ಪಾರ್ಟಿ(ಬಿಜೆಪಿ) ನಿಲುವನ್ನು ಕುರಿತು ವ್ಯಂಗ್ಯಮಾಡಲಾಗಿದೆ.

ಕೆಟ್ಟದ್ದನ್ನು ಮಾತನಾಡಬಾರದು, ಕೆಟ್ಟದ್ದನ್ನು ನೋಡಬಾರದು, ಕೆಟ್ಟದ್ದನ್ನು ಕೇಳಬಾರದು ಎನ್ನುವುದು ಸಾಮಾನ್ಯವಾಗಿ ಎಲ್ಲರಿಗು ತಿಳಿದರುವ ವಿಚಾರ. ಆದರೆ ಇದಕ್ಕೆ ವಿರುದ್ಧವಾಗಿ ಸಾಮಾಜಿಕ ಜಾಲತಾಣವೊಂದರಲ್ಲಿ ಬಿಜೆಪಿ ನಾಯಕರುಗಳ ಪೋಟೋ ಅಂಟಿಸಿ ಪೋಸ್ಟ್‌ ಮಾಡಲಾಗಿದೆ.

ಪೋಸ್ಟ್‌ನಲ್ಲಿ ಕಂಡುಬಂದಿರುವಂತೆ ಬಿಜೆಪಿ ಪಕ್ಷದ ನಾಯಕರುಗಳಾದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಮಾಜಿ ಸಚಿವ ಕೆ.ಎಸ್‌.ಈಶ್ವರಪ್ಪ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಸಚಿವ ಡಾ.ಕೆ. ಸುಧಾಕರ್ ಅವರ ಭಾವಚಿತ್ರಗಳನ್ನು ಅಂಟಿಸಿ ಸತ್ಯವನ್ನು ಹೇಳುವುದಿಲ್ಲ, ನುಡಿಯುವುದಿಲ್ಲ, ಕೇಳುವುದಿಲ್ಲ ಎಂದು ಬರೆಯಲಾಗಿದ್ದು, ಇದು ಕರ್ನಾಟಕದಲ್ಲಿ ಬಿಜೆಪಿ ಪಕ್ಷದ ನಿಲುವಾಗಿದೆ ಎಂದು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಪ್ರಧಾನ ಕಾರ್ಯದರ್ಶಿ ಮೆಹ್ರೋಜ್ ಖಾನ್ ಟ್ವಿಟರ್ ನಲ್ಲಿ ಪೋಸ್ಟ್‌ ಹಂಚಿಕೊಂಡಿದ್ದಾರೆ.

Related Articles

ಇತ್ತೀಚಿನ ಸುದ್ದಿಗಳು

You cannot copy content of this page