ಅಕ್ರಮ ಹಣ ವರ್ಗಾವಣೆ: ಸತ್ಯೇಂದ್ರ ಜೈನ್‌ಗೆ ಸುಪ್ರೀಂ ಕೋರ್ಟ್‌ನಿಂದ ಮತ್ತೆ ರಿಲೀಫ್, ಮಧ್ಯಂತರ ಜಾಮೀನು ಸೆಪ್ಟೆಂಬರ್ 12 ರವರೆಗೆ ವಿಸ್ತರಣೆ

ದೆಹಲಿಯ ಮಾಜಿ ಸಚಿವ ಮತ್ತು ಆಪ್ ನಾಯಕ ಸತ್ಯೇಂದ್ರ ಜೈನ್ ಅವರು ಮನಿ ಲಾಂಡರಿಂಗ್ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್‌ ಇನ್ನಷ್ಟು ರಿಲೀಫ್‌ ನೀಡಿದೆ. ಅವರಿಗೆ ನೀಡಲಾಗಿದ್ದ ಮಧ್ಯಂತರ ಜಾಮೀನನ್ನು ಕೋರ್ಟು ಸೆಪ್ಟೆಂಬರ್ 12ರವರೆಗೆ ವಿಸ್ತರಿಸಿ ಆದೇಶ ನೀಡಿದೆ. ವೈದ್ಯಕೀಯ ಕಾರಣಗಳಿಗಾಗಿ ಈ ವಿಸ್ತರಣೆ ಮಾಡಲಾಗಿದೆಯೆಂದು ಜೈನ್‌ ಅವರ ವಕೀಲರು ಹೇಳಿದ್ದಾರೆ.

ದೆಹಲಿ ಸರ್ಕಾರದಲ್ಲಿ ಸಚಿವರಾಗಿದ್ದ ಸಮಯದಲ್ಲಿ ಜೈನ್‌ ವಿರುದ್ಧ ಅಕ್ರಮ ಹಣ ವರ್ಗಾವಣೆಯ ಆರೋಪ ಕೇಳಿ ಬಂದಿತ್ತು. ಮತ್ತು ಈ ಕುರಿತು ED ತನಿಖೆ ಮಾಡುತ್ತಿತ್ತು. ಈ ಪ್ರಕರಣದಲ್ಲಿ ಬಂಧಿತರಾಗಿ ಸುಮಾರು ಒಂದು ವರ್ಷ ಜೈಲಿನಲ್ಲಿದ್ದರು. ಜೈಲಿನಲ್ಲಿರುವಾಗಲೇ ಅವರ ಆರೋಗ್ಯ ಹದಗೆಟ್ಟ ಕಾರಣ ಅವರನ್ನು ಆಸ್ಪತ್ರೆಗೆ ಸೇರಿಸಲಾಗಿತ್ತು.

ಈ ಹಿನ್ನೆಲೆಯಲ್ಲಿ, ಅವರ ಆರೋಗ್ಯ ಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು ಮೇ 26 ರಂದು ಸತ್ಯೇಂದ್ರ ಜೈನ್‌ಗೆ ಸುಪ್ರೀಂ ಕೋರ್ಟ್ 6 ವಾರಗಳ ಮಧ್ಯಂತರ ಜಾಮೀನು ನೀಡಿತ್ತು. ಈಗ ಈ ಜಾಮೀನಿನ ಅವಧಿಯನ್ನು ಹೆಚ್ಚಿಸಿ ಕೋರ್ಟ್‌ ಆದೇಶ ನೀಡಿದೆ.

Related Articles

ಇತ್ತೀಚಿನ ಸುದ್ದಿಗಳು