Sunday, July 27, 2025

ಸತ್ಯ | ನ್ಯಾಯ |ಧರ್ಮ

ಚುನಾವಣಾ ಬಾಂಡ್‌ಗಳ ಸಂಪೂರ್ಣ ಮಾಹಿತಿ ಬಿಟ್ಟುಕೊಡದ ಎಸ್‌ಬಿಐ: ಸುಪ್ರೀಂ ಕೋರ್ಟ್‌ ಮತ್ತೆ  ತರಾಟೆ

ನವದೆಹಲಿ:  ಎಸ್‌ಬಿಐ ಬ್ಯಾಂಕ್‌  ಚುನಾವಣಾ ಬಾಂಡ್‌ಗಳ ಸಂಪೂರ್ಣ ಮಾಹಿತಿಯನ್ನು ಹಂಚಿಕೊಳ್ಳದ್ದರಿಂದ ಸುಪ್ರೀಂ ಕೋರ್ಟ್ ಇಂದು ಮತ್ತೆ ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದೆ. 5 ವರ್ಷಗಳಲ್ಲಿ ಮಾಡಿದ ದೇಣಿಗೆಗಳ ಎಲ್ಲಾ ವಿವರಗಳನ್ನು ಹಂಚಿಕೊಳ್ಳಲು ಬ್ಯಾಂಕ್‌ಗೆ ಸುಪ್ರೀಂ ನಿರ್ದೇಶಿಸಿದೆ.

ಚುನಾವಣಾ ಆಯೋಗದ ಅರ್ಜಿಯನ್ನು ಆಲಿಸಿದ ಸುಪ್ರೀಂ ಕೋರ್ಟ್, ಎಸ್‌ಬಿಐ ನೀಡಿರುವ ಅಂಕಿಅಂಶಗಳು ಅಪೂರ್ಣವಾಗಿವೆ.  ದಾನಿಗಳು ಮತ್ತು ರಾಜಕೀಯ ಪಕ್ಷಗಳೊಂದಿಗಿನ ಸಂಬಂಧವನ್ನು ಹೇಳಿಕೆಯನ್ನು ಬಹಿರಂಗಪಡಿಸಿಲ್ಲ ಎಂದು ಛಿಮಾರಿ ಹಾಕಿತು.

ಮುಖ್ಯ ನ್ಯಾಯಮೂರ್ತಿ ಡಿ.ವೈ.ಚಂದ್ರಚೂಡ್ ನೇತೃತ್ವದ ಐವರು ನ್ಯಾಯಾಧೀಶರ ಪೀಠ ವಿಚಾರಣೆ ನಡೆಸಿತು.  ಎಸ್‌ಬಿಐ ಈಗಾಗಲೇ ಹಂಚಿಕೊಂಡಿರುವ ವಿವರಗಳ ಜೊತೆಗೆ ಚುನಾವಣಾ ಬಾಂಡ್ ಸಂಖ್ಯೆಯನ್ನು ಬಹಿರಂಗಪಡಿಸಬೇಕು ಎಂದು ಆದೇಶ ನೀಡಿತು.

“ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಪರವಾಗಿ ಯಾರು ಹಾಜರಾಗುತ್ತಿದ್ದಾರೆ? ಅವರು ಬಾಂಡ್ ಸಂಖ್ಯೆಗಳನ್ನು ಬಹಿರಂಗಪಡಿಸಿಲ್ಲ. ಅದನ್ನು ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಬಹಿರಂಗಪಡಿಸಬೇಕು” ಎಂದು ವಿಚಾರಣೆಯ ಆರಂಭದಲ್ಲಿಯೇ ಮುಖ್ಯ ನ್ಯಾಯಮೂರ್ತಿ ಚಂದ್ರಚೂಡ್ ತಿಳಿಸಿದರು. ಆದರೆ, ಎಸ್‌ಬಿಐ ಅಧಿಕಾರಿಗಳು ಉತ್ತರಿಸಲು ತಡವರಿಸಿದರು. ಮಾರ್ಚ್ 18 ರಂದು ನಡೆಯಲಿರುವ ಮುಂದಿನ ವಿಚಾರಣೆಯ ಸಮಯದಲ್ಲಿ ಲೋಪವನ್ನು ವಿವರಿಸಲು ಬ್ಯಾಂಕ್‌ಗೆ ನಿರ್ದೇಶಿಸಿದೆ.

ಈ ಬಾಂಡ್‌ಗಳು ರಾಜಕೀಯ ಪಕ್ಷಗಳಿಗೆ ಹಣವನ್ನು ಘೋಷಿಸದೆ ದೇಣಿಗೆ ನೀಡಲು ವ್ಯಕ್ತಿಗಳಿಗೆ ಮತ್ತು ವ್ಯವಹಾರಗಳಿಗೆ ಅವಕಾಶ ಮಾಡಿಕೊಟ್ಟಿತ್ತು. 2018 ರಲ್ಲಿ ಬಿಜೆಪಿ ಸರ್ಕಾರವು ನಗದು ದೇಣಿಗೆಗೆ ಪರ್ಯಾಯವಾಗಿ ಚುನಾವಣಾ ಬಾಂಡ್‌ ಅನ್ನು ಪರಿಚಯಿಸಿತ್ತು. ಸುಪ್ರೀಂ ಕೋರ್ಟ್ ಕಳೆದ ತಿಂಗಳು ಈ ಯೋಜನೆಯನ್ನು ರದ್ದುಗೊಳಿಸಿದ್ದು, ಇದು ಅಸಂವಿಧಾನಿಕ ಎಂದು ತೀರ್ಪು ನೀಡಿತ್ತು.

Related Articles

ಇತ್ತೀಚಿನ ಸುದ್ದಿಗಳು

You cannot copy content of this page