Sunday, April 28, 2024

ಸತ್ಯ | ನ್ಯಾಯ |ಧರ್ಮ

ಕೇರಳದಲ್ಲಿ ಅಣಕು ಮತದಾನದ ಸಂದರ್ಭದಲ್ಲಿ ಬಿಜೆಪಿಗೆ ಒಂದು ಹೆಚ್ಚುವರಿ ಮತ: ಪರಿಶೀಲಿಸಲು ಸೂಚಿಸಿದ ಸುಪ್ರೀಂ. ಆರೋಪ ನಿರಾಕರಿಸಿದ ಆಯೋಗ

ಹೊಸದೆಹಲಿ: ಕೇರಳದ ಕಾಸರಗೋಡಿನಲ್ಲಿ ಅಣಕು ಮತದಾನದ ವೇಳೆ ವಿದ್ಯುನ್ಮಾನ ಮತಯಂತ್ರಗಳು (ಇವಿಎಂ) ಬಿಜೆಪಿ ಪರವಾಗಿ ತಪ್ಪಾಗಿ ಮತಗಳನ್ನು ದಾಖಲಿಸಿವೆ ಎಂಬ ಮಾಧ್ಯಮ ವರದಿಗಳನ್ನು ಪರಿಶೀಲಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ ಚುನಾವಣಾ ಆಯೋಗಕ್ಕೆ (ಇಸಿ) ಮೌಖಿಕವಾಗಿ ಸೂಚಿಸಿದೆ.

ನ್ಯಾಯಮೂರ್ತಿಗಳಾದ ಸಂಜೀವ್ ಖನ್ನಾ ಮತ್ತು ದೀಪಂಕರ್ ದತ್ತಾ ಅವರ ಪೀಠವು ವಕೀಲ ಪ್ರಶಾಂತ್ ಭೂಷಣ್ ಅವರು ಎತ್ತಿರುವ ಅನುಮಾನಗಳನ್ನು ಪರಿಶೀಲಿಸುವಂತೆ ಆಯೋಗವನ್ನು ಪ್ರತಿನಿಧಿಸುವ ಹಿರಿಯ ವಕೀಲ ಮಣಿಂದರ್ ಸಿಂಗ್ ಅವರಿಗೆ ಸೂಚಿಸಿತು.

ವೋಟರ್-ವೆರಿಫೈಬಲ್ ಪೇಪರ್ ಆಡಿಟ್ ಟ್ರಯಲ್ (ವಿವಿಪಿಎಟಿ) ಸ್ಲಿಪ್‌ಗಳೊಂದಿಗೆ ಇವಿಎಂಗಳ ಮೂಲಕ ಚಲಾವಣೆಯಾದ ಪ್ರತಿ ಮತವನ್ನು ಎಣಿಸಲು ಚುನಾವಣಾ ಸಂಸ್ಥೆಗೆ ನಿರ್ದೇಶನಗಳನ್ನು ಕೋರಿ ಸಲ್ಲಿಸುತ್ತಿರುವ ಅರ್ಜಿಗಳ ವಿಚಾರಣೆಯ ನಡುವೆ, ಭೂಷಣ್ ಅವರು ಮಂಗಳವಾರ ಪ್ರಕಟಿಸಿದ ಸುದ್ದಿ ಲೇಖನದ ಕಡೆಗೆ ಎಡಪಕ್ಷಗಳ ಏಜೆಂಟರು ಸುಪ್ರೀಂ ಕೋರ್ಟ್‌ನ ಗಮನ ಸೆಳೆದರು. ಕೇರಳದ ಡೆಮಾಕ್ರಟಿಕ್ ಫ್ರಂಟ್ (ಎಲ್‌ಡಿಎಫ್) ಮತ್ತು ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್) ಅಭ್ಯರ್ಥಿಗಳು ಮತದಾನಕ್ಕೆ ಮೊದಲು ಯಂತ್ರಗಳ ಕಾರ್ಯಾರಂಭದ ಸಮಯದಲ್ಲಿ ಬಿಜೆಪಿಯ ಕಮಲದ ಗುರುತು ಹೆಚ್ಚುವರಿ ಮತಗಳನ್ನು ಪಡೆಯುತ್ತಿದೆ ಎಂದು ಆರೋಪಿಸಿದ್ದಾರೆ.

ಪ್ರತಿ ವಿಧಾನಸಭಾ ಕ್ಷೇತ್ರದಲ್ಲಿ ಆಯ್ಕೆಯಾದ ಯಾವುದಾದರೂ ಐದು ಮತಗಟ್ಟೆಗಳ ವಿವಿಪ್ಯಾಟ್ ಸ್ಲಿಪ್‌ಗಳನ್ನು ಎಣಿಸುವ ಪ್ರಸ್ತುತ ಪದ್ಧತಿಗೆ ವಿರುದ್ಧವಾಗಿ ಇವಿಎಂಗಳಲ್ಲಿ ಚಲಾವಣೆಯಾದ ಮತಗಳನ್ನು ವಿವಿಪ್ಯಾಟ್‌ ಸ್ಲಿಪ್‌ ಜೊತೆ ಕಡ್ಡಾಯವಾಗಿ ಕ್ರಾಸ್-ವೆರಿಫೈ ಮಾಡಲು ಆಯೋಗಕ್ಕೆ ನಿರ್ದೇಶನ ನೀಡುವಂತೆ ಕೋರಿ ಸಲ್ಲಿಸಲಾದ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳನ್ನು (ಪಿಐಎಲ್) ಸುಪ್ರೀಂ ಕೋರ್ಟ್ ವಿಚಾರಣೆ ನಡೆಸುತ್ತಿದೆ.

ಆದರೆ ಈ ಕುರಿತು ನ್ಯಾಯಾಲಯಕ್ಕೆ ಪ್ರತಿಕ್ರಿಯಿಸಿರುವ ಆಯೋಗವು “ಈ ಸುದ್ದಿಗಳು ಸುಳ್ಳು, ನಾವು ಜಿಲ್ಲಾಧಿಕಾರಿಗಳ ಆರೋಪವನ್ನು ಪರಿಶೀಲಿಸಿದ್ದೇವೆ ಮತ್ತು ಅವು ಸುಳ್ಳು ಎಂದು ಮೇಲ್ನೋಟಕ್ಕೆ ಕಾಣುತ್ತಿದೆ. ನಾವು ನ್ಯಾಯಾಲಯಕ್ಕೆ ವಿವರವಾದ ವರದಿಯನ್ನು ಸಲ್ಲಿಸುತ್ತೇವೆ” ಎಂದು ಹಿರಿಯ ಉಪ ಚುನಾವಣಾ ಆಯುಕ್ತ ನಿತೇಶ್ ಕುಮಾರ್ ವ್ಯಾಸ್ ನ್ಯಾಯಮೂರ್ತಿಗಳಾದ ಸಂಜೀವ್ ಖನ್ನಾ ಮತ್ತು ದೀಪಂಕರ್ ದತ್ತಾ ಅವರುಗಳಿದ್ದ ನ್ಯಾಯಮೂರ್ತಿಗಳ ಪೀಠಕ್ಕೆ ತಿಳಿಸಿದರು.

Related Articles

ಇತ್ತೀಚಿನ ಸುದ್ದಿಗಳು