Wednesday, July 24, 2024

ಸತ್ಯ | ನ್ಯಾಯ |ಧರ್ಮ

ಎಸ್ಸಿ, ಎಸ್ಟಿ ಅಭಿವೃದ್ಧಿ ನಿಧಿಯನ್ನು ಗೋವು ಅಭಿವೃದ್ಧಿಗೆ ಬಳಸಿಕೊಂಡ ಮಧ್ಯಪ್ರದೇಶ ಸರ್ಕಾರ

ಭೂಪಾಲ್:‌ ಮಧ್ಯಪ್ರದೇಶ ರಾಜ್ಯ ಸರ್ಕಾರವು ಕೇಂದ್ರ ಸರ್ಕಾರದ ಅನುದಾನಿತ ಉಪಯೋಜನೆಯಡಿ ಪರಿಶಿಷ್ಟ ಜಾತಿ ಮತ್ತು ಪಂಗಡಗಳ ಕಲ್ಯಾಣಕ್ಕಾಗಿ ಇರುವ ನಿಧಿಯನ್ನುಗೋವುಗಳ ಸಂವರ್ಧನೆಗೆ ಮತ್ತು ಧಾರ್ಮಿಕ ಕೇಂದ್ರಗಳ ಮ್ಯೂಸಿಯಂ ಅಭಿವೃದ್ಧಿಗೆ ಬಳಕೆ ಮಾಡಿಕೊಂಡಿರುವುದು ಈಗ ಹಿಂದೂಸ್ತಾನ್‌ ಟೈಮ್ಸ್‌ ವರದಿಯಿಂದ ಹೊರಂಗಗೊಂಡಿದೆ.

ವರದಿಯ ಪ್ರಕಾರ, ‘ಗೋ ಸಂವರ್ಧನೆ ಮತ್ತು ಪಶು ಸಂವರ್ಧನೆ ಯೋಜನೆಯಡಿ ಗೋ ಕಲ್ಯಾಣಕ್ಕೆ ನಿಗದಿಯಾಗಿದ್ದ 252 ಕೋಟಿ ರೂಪಾಯಿಗಳಲ್ಲಿ 96.76 ಕೋಟಿ ರೂಪಾಯಿಗಳನ್ನು ಪರಿಶಿಷ್ಟರ ಕಲ್ಯಾಣಕ್ಕೆ ಮೀಸಲಿಟ್ಟಿದ್ದ ನಿಧಿಯಿಂದ ಬಳಸಿಕೊಳ್ಳಲಾಗಿದೆ. ಗೋ ಕಲ್ಯಾಣ ನಿಧಿಯನ್ನು ಕಳೆದ ವರ್ಷಕ್ಕಿಂತ 90 ಕೋಟಿ ರೂಪಾಯಿಯಷ್ಟು ಹೆಚ್ಚಿಸಲಾಗಿದೆ.

ಅದೇ ರೀತಿ, ಆರು ಧಾರ್ಮಿಕ ಕ್ಷೇತ್ರಗಳಿಗೆ ದಲಿತರಿಗೆ ಮೀಸಲಿಟ್ಟ ಮೀಸಲಿಟ್ಟ 109 ಕೋಟಿ ರೂ.ಗಳಲ್ಲಿ ಅರ್ಧದಷ್ಟು ಹಣ ತೆಗೆದುಕೊಳ್ಳಲಾಗಿದೆ ಎಂದು ಹಿಂದೂಸ್ತಾನ್ ಟೈಮ್ಸ್ ದಾಖಲೆಗಳು ಮತ್ತು ಸರ್ಕಾರಿ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ ಮಾಡಿದೆ.

ಪರಿಶಿಷ್ಟರ ಕಲ್ಯಾಣ ನಿಧಿಯನ್ನು ಇತರ ಕಾರ್ಯಕ್ರಮಗಳಿಗೆ ಬಳಸಿಕೊಳ್ಳುವುದು ಸಾಮಾನ್ಯ ಪ್ರಕ್ರಿಯೆ. ಇದರಿಂದ ಪರಿಶಿಷ್ಟರು ಕೂಡ ಪ್ರಯೋಜನ ಪಡೆಯುತ್ತಾರೆ ಎಂದು ಹಣಕಾಸು ಇಲಾಖೆಯ ಅಧಿಕಾರಿಯೊಬ್ಬರು ಹೇಳಿದ್ದಾಗಿ ಹಿಂದೂಸ್ತಾನ್ ಟೈಮ್ಸ್ ವರದಿಯಲ್ಲಿ ತಿಳಿಸಿದೆ. “ನಮ್ಮ ಬಜೆಟರಿ ವ್ಯವಸ್ಥೆಯಲ್ಲಿ ಇತರ ಯೋಜನೆಗಳಿಗೆ ಎಸ್‌ಸಿ, ಎಸ್‌ಟಿ ಉಪಯೋಜನೆ ಹಣವನ್ನು ಬಳಸಿಕೊಳ್ಳುವುದಕ್ಕೆ ಯಾವುದೇ ನಿರ್ಬಂಧ ಇಲ್ಲ” ಎಂದು ಅಧಿಕಾರಿ ಹೇಳಿದ್ದಾರೆ ಎಂದಿದೆ.

ಮಧ್ಯ ಪ್ರದೇಶವು ಕರ್ನಾಟಕದ ಬಳಿಕ ಎಸ್‌ಸಿ, ಎಸ್ಟಿ ನಿಧಿಯನ್ನು ಬೇರೆ ಯೋಜನೆಗಳಿಗೆ ಬಳಕೆ ಮಾಡಿರುವ ಎರಡನೇ ರಾಜ್ಯವಾಗಿದೆ. ಕರ್ನಾಟಕ ಸರ್ಕಾರ ಕಲ್ಯಾಣ ಯೋಜನೆಗಳಿಗಾಗಿ 14 ಸಾವಿರ ಕೋಟಿ ರೂಪಾಯಿಗಳನ್ನು ಈ ಉಪಯೋಜನೆಯಿಂದ ವರ್ಗಾಯಿಸಿದ್ದನ್ನು ಇಲ್ಲಿ ಸ್ಮರಿಸಬಹುದು.

Related Articles

ಇತ್ತೀಚಿನ ಸುದ್ದಿಗಳು