ಬಿಲ್ಕಿಸ್ ಬಾನೊ ಪ್ರಕರಣ: ಬಿಲ್ಕಿಸ್ ಬಾನೊ ಸಾಮೂಹಿಕ ಅತ್ಯಾಚಾರ ಪ್ರಕರಣದ ಅಪರಾಧಿಗಳ ಅವಧಿಪೂರ್ವ ಬಿಡುಗಡೆಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಜನವರಿ 8 ಸೋಮವಾರದಂದು ತನ್ನ ತೀರ್ಪು ಪ್ರಕಟಿಸಲಿದೆ.
2002ರ ಗುಜರಾತ್ ಗಲಭೆಯಲ್ಲಿ ಬಿಲ್ಕಿಸ್ ಬಾನೋ ಅವರ ಸಾಮೂಹಿಕ ಅತ್ಯಾಚಾರ ಮತ್ತು ಆಕೆಯ ಏಳು ಕುಟುಂಬ ಸದಸ್ಯರ ಹತ್ಯೆಗೆ ಜೀವಾವಧಿ ಶಿಕ್ಷೆಗೆ ಗುರಿಯಾಗಿದ್ದ 11 ಜನರನ್ನು ಅವಧಿಗೆ ಮುನ್ನ ಬಿಡುಗಡೆ ಮಾಡಿರುವ ಗುಜರಾತ್ ಸರ್ಕಾರದ ನಿರ್ಧಾರವನ್ನು ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಗಳ ಮೇಲೆ ನ್ಯಾಯಮೂರ್ತಿ ಬಿ.ವಿ.ನಾಗರತ್ನ ನೇತೃತ್ವದ ಪೀಠವು ತೀರ್ಪು ಪ್ರಕಟಿಸಲಿದೆ. ಗೋಧ್ರಾ ರೈಲು ದಹನ ಘಟನೆಯ ನಂತರ. 11 ಅಪರಾಧಿಗಳಿಗೆ ಆಗಸ್ಟ್ 15, 2022ರಂದು ಆಗಿನ ಗುಜರಾತ್ ಸರ್ಕಾರವು ವಿನಾಯಿತಿ ನೀಡಿತು.