ಹಾಸನ :10ನೇ ತರಗತಿ ವಿದ್ಯಾರ್ಥಿನಿ ಮಗುವಿಗೆ ಜನ್ಮ ನೀಡಿರುವ ಆಘಾತಕಾರಿ ಘಟನೆ ಜಿಲ್ಲೆಯ ಚನ್ನರಾಯಪಟ್ಟಣ ತಾಲ್ಲೂಕಿನಲ್ಲಿ ನಡೆದಿದ್ದು, ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ. ಖಾಸಗಿ ಶಾಲೆಯಲ್ಲಿ ಹತ್ತನೇ ತರಗತಿ ಓದುತ್ತಿದ್ದ ವಿದ್ಯಾರ್ಥಿನಿ ಮೇಲೆ ಅದೇ ಶಾಲೆಯ ಬಸ್ ಚಾಲಕ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ ಎಂದು ಆರೋಪಿಸಲಾಗಿದೆ. ಸದ್ಯ ಶಾಲೆ ಬಸ್ ಚಾಲಕ ತಲೆಮರಿಸಿಕೊಂಡಿದ್ದಾನೆ. ನಿತ್ಯ ಬಸ್ನಲ್ಲಿ ಬರುವ ವಿದ್ಯಾರ್ಥಿನಿಗೆ ಚಾಕೋಲೆಟ್ ನೀಡಿ ಪುಸಲಾಯಿಸಿ ಆಕೆಯನ್ನು ಲೈಂಗಿಕವಾಗಿ ಬಳಿಸಿಕೊಂಡಿದ್ದಾನೆ. ಪರಿಣಾಮ ಇದೀಗ ವಿದ್ಯಾರ್ಥಿನಿ ಗರ್ಭಿಣಿಯಾಗಿದ್ದು, ಎರಡು ದಿನಗಳ ಹಿಂದೆ ಮಗುವಿಗೆ ಜನ್ಮ ನೀಡಿದ್ದಾಳೆ.
ಬಾಲಕಿ ಓದುತ್ತಿರುವ ಶಾಲೆಯ ಬಸ್ ಚಾಲಕನಾಗಿದ್ದ ಚನ್ನರಾಯಪಟ್ಟಣ ತಾಲ್ಲೂಕಿನ ಬರಗೂರು ಗ್ರಾಮದ ರಂಜನ್ ಈ ನೀಚ ಕೃತ್ಯ ಎಸಗಿದ್ದಾನೆ ಎಂದು ತಿಳಿದು ಬಂದಿದೆ. ವಿದ್ಯಾರ್ಥಿನಿ ಮಗುವಿಗೆ ಜನ್ಮ ನೀಡಿದ ವಿಚಾರ ತಿಳಿಯುತ್ತಿದ್ದಂತೆಯೇ ತಲೆಮರೆಸಿಕೊಂಡಿದ್ದಾನೆ. ಪ್ರತಿ ದಿನ ಶಾಲೆಗೆ ಬಸ್ ನಲ್ಲಿ ಹೋಗುತ್ತಿದ್ದ ವಿದ್ಯಾರ್ಥಿನಿಯನ್ನು ರಂಜತ್ ಪುಸಲಾಯಿಸಿ ಶ್ರವಣಬೆಳಗೊಳಕ್ಕೆ ಕರೆದೊಯ್ದು ಲೈಂಗಿಕವಾಗಿ ಬಳಸಿಕೊಂಡಿದ್ದಾನೆ. ಇದರಿಂದ ವಿದ್ಯಾರ್ಥಿನಿ ಎರಡು ದಿನದ ಹಿಂದೆ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾಳೆ. ಇನ್ನು ಬಾಲಕಿ ಮತ್ತು ಮಗುವನ್ನು ಕೆಲ ದಿನಗಳ ಕಾಲ ಆರೈಕೆ ಬಳಿಕ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಸಾಂತ್ವನ ಕೇಂದ್ರಕ್ಕೆ ಒಪ್ಪಿಸಲು ಅಧಿಕಾರಿಗಳು ತೀರ್ಮಾನಿಸಿದ್ದು, ಈ ಬಗ್ಗೆ ರಂಜತ್ ವಿರುದ್ಧ ನುಗ್ಗೇಹಳ್ಳಿ ಪೊಲೀಸ್ ಠಾಣೆಯಲ್ಲಿ ಪೋಕ್ಸೊ ಅಡಿಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲಿಸರು ತನಿಖೆ ನಡೆಸಿದ್ದಾರೆ.
ಅಮಾನವೀಯ ಕೃತ್ಯ ಎಸಗಿರುವ ಪಾಪಿಗೆ ಕಠಿಣ ಶಿಕ್ಷೆಯಾಗಲಿ ಎಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ.
