Monday, March 17, 2025

ಸತ್ಯ | ನ್ಯಾಯ |ಧರ್ಮ

ಮಲೆನಾಡಲ್ಲಿ ಮಂಗನ ಖಾಯಿಲೆಗೆ ಎರಡನೇ ಬಲಿ

ಇಂದು ಮಾರಣಾಂತಿಕ ಮಂಗನಕಾಯಿಲೆಗೆ ಮಲೆನಾಡಿನ ಮತ್ತೋರ್ವ ಮಹಿಳೆ ಸಾವನ್ನಪ್ಪಿದ್ದಾರೆ. ಫೆಬ್ರವರಿ 25 ರಂದು ತೀರ್ಥಹಳ್ಳಿ ತಾಲೂಕಿನ ಕೊನೇರಿಪುರ ಗ್ರಾಮದ 54 ವರ್ಷದ ಮಹಿಳೆಯೊಬ್ಬರು ಮೃತಪಟ್ಟಿದ್ದರು. ಈಗ ಎನ್ ಆರ್ ಪುರಂ ತಾಲ್ಲೂಕಿನ ಕಟ್ಟಿನ ಮನೆ ಗ್ರಾಮದ ವೃದ್ಧೆಯೊಬ್ಬರು ಸಾವನ್ನಪ್ಪಿದ್ದಾರೆ.

ಚಿಕ್ಕಮಗಳೂರಿನ ಎನ್ ಆರ್ ಪುರ ತಾಲ್ಲೂಕಿನ ಕಟ್ಟಿನಮನೆ ಗ್ರಾಮ ನಿವಾಸಿ ಕಮಲಾ (65) ಎಂಬುವರೇ ಸಾವನ್ನಪ್ಪಿದಂತ ಮಹಿಳೆಯಾಗಿದ್ದಾರೆ.

ಮೃತ ಕಮಲಾ ಅವರು ಚಿಕ್ಕಮಗಳೂರಿನ ಎನ್ ಆರ್ ಪುರದ ಮೇಲ್ಪಾಲ್ ಗ್ರಾಮದಲ್ಲಿನ ಕಾಫಿ ತೋಟದಲ್ಲಿ ಕೂಲಿ ಕೆಲಸ ಮಾಡುತ್ತಿದ್ದರು. ಕೆಲ ದಿನಗಳಿಂದ ತೀವ್ರ ಜ್ವರದಿಂದ ಬಳಲುತ್ತಿದ್ದಂತ ಅವರನ್ನು ಕೊಪ್ಪ ಸರ್ಕಾರಿ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಲಾಗಿತ್ತು.

ಆದರೇ ಚಿಕಿತ್ಸೆ ಫಲಿಸದೆ ಕಮಲಾ ಸಾವನ್ನಪ್ಪಿದ್ದಾರೆ.

ಕಮಲಾ ಅವರನ್ನು ಮಂಗನಕಾಯಿಲೆ ಪತ್ತೆ ಪರೀಕ್ಷೆಗೆ ಒಳಪಡಿಸಿದಾಗ ಅದು ದೃಢಪಟ್ಟಿತ್ತು. ಅವರಿಗೆ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೇ ಇಂದು ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದಾರೆ.

Related Articles

ಇತ್ತೀಚಿನ ಸುದ್ದಿಗಳು

You cannot copy content of this page