Tuesday, April 8, 2025

ಸತ್ಯ | ನ್ಯಾಯ |ಧರ್ಮ

BREAKING NEWS: ಇಂದು ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಪ್ರಕಟ

ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶ ಇಂದು ಮಧ್ಯಾಹ್ನ 12 ಗಂಟೆಗೆ ಪ್ರಕಟವಾಗಲಿದೆ ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ತಿಳಿಸಿದೆ . ಹಲವು ದಿನಗಳಿಂದ ಕಾಯುತ್ತಿದ್ದ ವಿದ್ಯಾರ್ಥಿಗಳಿಗೆ ಮಂಡಳಿ ಸಿಹಿ ಸುದ್ದಿ ನೀಡಿದ್ದು, ಪರೀಕ್ಷೆ-1ರ 1ರ ಫಲಿತಾಂಶವು ಇಂದು ಪ್ರಕಟಗೊಳ್ಳಲಿದೆ ಎಂದು ತಿಳಿಸಿದೆ.

ಫಲಿತಾಂಶದ ಬಗ್ಗೆ ಪತ್ರಿಕಾ ಪ್ರಕಟಣೆಯಲ್ಲಿ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಮಾಹಿತಿ ಹಂಚಿಕೊಂಡಿದ್ದು, ಮಾರ್ಚ್ 2025ರ ದ್ವಿತೀಯ ಪಿಯುಸಿ ಪರೀಕ್ಷೆ-1 ನ್ನು ದಿನಾಂಕ:01/03/2025 ರಿಂದ 20/03/2025 ರವರೆಗೆ ನಡೆಸಲಾಯಿತು. ಎಲ್ಲಾ ವಿಷಯಗಳ ಉತ್ತರ ಪತ್ರಿಕೆಗಳ ಮೌಲ್ಯಮಾಪನ ಕಾರ್ಯವು ಮುಕ್ತಾಯವಾಗಿರುತ್ತದೆ ಎಂದಿದೆ.

ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ಮಲ್ಲೇಶ್ವರದ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯಲ್ಲಿ ಮಧ್ಯಾಹ್ನ 12.30ಕ್ಕೆ ಫಲಿತಾಂಶ ಬಿಡುಗಡೆ ಮಾಡಲಿದ್ದಾರೆ. ನಂತರ 1.30ರ ವೇಳೆಗೆ ವಿದ್ಯಾರ್ಥಿಗಳು ವೆಬ್‌ಸೈಟ್‌ನಲ್ಲಿ (https://karres (https://karresults.nic.in) ವೀಕಿಸಬಹುದು ಎಂದು ಮಂಡಳಿಯು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಫಲಿತಾಂಶವನ್ನು ಈ ರೀತಿ ಚೆಕ್ ಮಾಡಿ
ವಿದ್ಯಾರ್ಥಿಗಳು ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ-1ರ ಫಲಿತಾಂಶವನ್ನು https://karresults.nic.in ಜಾಲತಾಣದಲ್ಲಿ ದಿನಾಂಕ: 08/04/2025 ರ ಮಧ್ಯಾಹ್ನ 1:30 ಗಂಟೆಯ ನಂತರ ವೀಕ್ಷಿಸಬಹುದಾಗಿದೆ ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯ ಅಧ್ಯಕ್ಷರು ತಿಳಿಸಿದ್ದಾರೆ.

Related Articles

ಇತ್ತೀಚಿನ ಸುದ್ದಿಗಳು

You cannot copy content of this page