Home ಬ್ರೇಕಿಂಗ್ ಸುದ್ದಿ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟಣೆ ಮುಂದೂಡಿಕೆ

ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟಣೆ ಮುಂದೂಡಿಕೆ

0

ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಪ್ರಕಟಿಸಬೇಕಿದ್ದ ದ್ವಿತೀಯ ಪಿಯುಸಿ ಪರೀಕ್ಷೆ-1ರ ಫಲಿತಾಂಶವನ್ನು ಮುಂದೂಡಲಾಗಿದೆ. ಫಲಿತಾಂಶ ಪ್ರಕಟಣೆಯ ನೂತನ ದಿನಾಂಕವನ್ನು ಶೀಘ್ರದಲ್ಲೇ ತಿಳಿಸಲಾಗುವುದಾಗಿ ಮಂಡಳಿ ತಿಳಿಸಿದೆ.

ಮೊದಲ ಬಾರಿಗೆ ಎಸ್‌ಎಸ್‌ಎಲ್ಸಿ ಹಾಗೂ ದ್ವಿತೀಯ ಪಿಯುಸಿ ಪರೀಕ್ಷೆಗಳು ಆರಂಭಕ್ಕೂ ಮುನ್ನವೇ ಫಲಿತಾಂಶ ಪ್ರಕಟಣೆಯ ಸಂಭಾವ್ಯ ದಿನಾಂಕಗಳನ್ನು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ಪ್ರಕಟಿಸಿದ್ದರು.

ಆದರೆ ದಾವಣಗೆರೆ ದಕ್ಷಿಣ ಮತ್ತು ಬಾಗಲಕೋಟೆ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆ ಹಿನ್ನೆಲೆ ಮಂಗಳವಾರ ಫಲಿತಾಂಶ ಪ್ರಕಟಣೆ ಸಾಧ್ಯವಾಗಿಲ್ಲ. ನೀತಿ ಸಂಹಿತೆ ಜಾರಿಯಿರುವುದರಿಂದ ಫಲಿತಾಂಶ ಪ್ರಕಟಣೆಗೆ ಅನುಮತಿ ಕೋರಿ ಚುನಾವಣಾ ಆಯೋಗಕ್ಕೆ ಪತ್ರ ಬರೆಯಲಾಗಿದೆ.

ಈ ಹಿನ್ನೆಲೆಯಲ್ಲಿ ಏಪ್ರಿಲ್ 7ರಂದು ಫಲಿತಾಂಶ ಪ್ರಕಟವಾಗುವುದಿಲ್ಲ ಎಂದು ಮಂಡಳಿ ಸ್ಪಷ್ಟಪಡಿಸಿದೆ. ಚುನಾವಣಾ ಆಯೋಗದಿಂದ ಅನುಮತಿ ದೊರೆತಲ್ಲಿ ಏಪ್ರಿಲ್ 8ರಂದು ಫಲಿತಾಂಶ ಪ್ರಕಟಿಸುವ ಸಾಧ್ಯತೆ ಇದೆ. ಇಲ್ಲದಿದ್ದರೆ ಪ್ರಕಟಣೆಯಲ್ಲಿ ಇನ್ನಷ್ಟು ವಿಳಂಬವಾಗುವ ಸಾಧ್ಯತೆಯಿದ್ದು, ಈ ಕುರಿತು ಅಧಿಕೃತ ಮಾಹಿತಿ ಮಂಗಳವಾರ ಸಂಜೆ ಬಿಡುಗಡೆ ಆಗಲಿದೆ.

ಚುನಾವಣಾ ಆಯೋಗದಿಂದ ಪ್ರಕಟಣೆಗೆ ಯಾವುದೇ ತೊಂದರೆ ಇಲ್ಲದಿದ್ದರೂ, ಉಪಚುನಾವಣೆ ಸಂದರ್ಭ ಸಚಿವರು ಲಭ್ಯವಿಲ್ಲದ ಕಾರಣ ಫಲಿತಾಂಶ ಪ್ರಕಟಣೆ ಮುಂದೂಡಲಾಗಿದೆ ಎಂದು ತಿಳಿದುಬಂದಿದೆ.

You cannot copy content of this page

Exit mobile version