Home ದೇಶ CPI(M) ಹಿರಿಯ ನಾಯಕ ಸೀತಾರಾಂ ಯೆಚೂರಿ ಆರೋಗ್ಯ ಸ್ಥಿತಿ ಗಂಭೀರ: ಆಸ್ಪತ್ರೆಗೆ ದಾಖಲು

CPI(M) ಹಿರಿಯ ನಾಯಕ ಸೀತಾರಾಂ ಯೆಚೂರಿ ಆರೋಗ್ಯ ಸ್ಥಿತಿ ಗಂಭೀರ: ಆಸ್ಪತ್ರೆಗೆ ದಾಖಲು

0

ನವದೆಹಲಿ: ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾರ್ಕ್ಸ್‌ವಾದಿ) ಪ್ರಧಾನ ಕಾರ್ಯದರ್ಶಿ ಸೀತಾರಾಮ್ ಯೆಚೂರಿ ಅವರ ಆರೋಗ್ಯ ಗಂಭೀರವಾಗಿದ್ದು, ಕೃತಕ ಉಸಿರಾಟದ ಬೆಂಬಲದಲ್ಲಿದ್ದಾರೆ ಎಂದು ಸಿಪಿಐ ಪ್ರಕಟಣೆಯಲ್ಲಿ ತಿಳಿಸಿದೆ.

72 ವರ್ಷದ ಯೆಚೂರಿ ಅವರನ್ನು ಆಗಸ್ಟ್ 19 ರಂದು ನ್ಯುಮೋನಿಯಾ ತರಹದ ಎದೆ ಸೋಂಕಿನ ಚಿಕಿತ್ಸೆಗಾಗಿ ಏಮ್ಸ್‌ಗೆ ದಾಖಲಿಸಲಾಗಿತ್ತು. ಅವರು ವೆಂಟಿಲೇಟರ್ ನಲ್ಲಿದ್ದು, ವೈದ್ಯರ ತಂಡ ನಿಗಾ ವಹಿಸಿದೆ. ಈ ಸಮಯದಲ್ಲಿ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದೆ ಎಂದು CPI ಅಧಿಕೃತ ಹೇಳಿಕೆಯನ್ನು ಪ್ರಕಟಿಸಿದೆ. ಸೀತಾರಾಂ ಯೆಚೂರಿ ಅವರ ಕಾಯಿಯಿಲೆಯ ಸ್ವರೂಪವನ್ನು ಆಸ್ಪತ್ರೆ ಬಹಿರಂಗಪಡಿಸಿಲ್ಲ. ಯೆಚೂರಿ ಇತ್ತೀಚೆಗೆ ಕಣ್ಣಿನ ಪೊರೆ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದರು.

ಸ್ಟೂಡೆಂಟ್ಸ್ ಫೆಡರೇಶನ್ ಆಫ್ ಇಂಡಿಯಾ (SFI) ಸದಸ್ಯರಾದ ಒಂದು ವರ್ಷದ ನಂತರ 1975 ರಲ್ಲಿ ಸೀತಾರಾಮ್ ಯೆಚೂರಿ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾರ್ಕ್ಸ್‌ವಾದಿ) ಗೆ ಸೇರಿದರು.

ಜವಾಹರಲಾಲ್ ನೆಹರು ವಿಶ್ವವಿದ್ಯಾನಿಲಯದಲ್ಲಿ (ಜೆಎನ್‌ಯು) ವಿದ್ಯಾರ್ಥಿಯಾಗಿದ್ದಾಗ ತುರ್ತು ಪರಿಸ್ಥಿತಿಯ ಸಮಯದಲ್ಲಿ ಅವರನ್ನು ಬಂಧನಕ್ಕೆ ಒಳಗಾಗಿದ್ದರು. 1977 ಮತ್ತು 1988 ರ ನಡುವೆ ಮೂರು ಬಾರಿ ಜೆಎನ್‌ಯು ವಿದ್ಯಾರ್ಥಿಗಳ ಒಕ್ಕೂಟದ ಅಧ್ಯಕ್ಷರಾಗಿ ಆಯ್ಕೆಯಾಗಿದ್ದರು.

2004 ರಲ್ಲಿ ಯುಪಿಎ ಸರ್ಕಾರವನ್ನು ರಚಿಸುವಲ್ಲಿ ಸೀತಾರಾಂ ಯೆಚೂರಿ ಮಹತ್ವದ ಪಾತ್ರವನ್ನು ವಹಿಸಿದರು. ಇತ್ತೀಚೆಗೆ 45 ಲ್ಯಾಟರಲ್ ಎಂಟ್ರಿ ಅಧಿಕಾರಿಗಳ ನೇಮಕ ಜಾಹೀರಾತು ಕುರಿತು ಕೇಂದ್ರ ಸರ್ಕಾರದ ವಿರುದ್ಧ ಯೆಚೂರಿ ತೀವ್ರ ಟೀಕೆ ಮಾಡಿದ್ದರು. ಇವರ ಟೀಕೆಯ ನಂತರ ಕೇಂದ್ರ ಸರ್ಕಾರ ಆ ಹುದ್ದೆಗಳ ಜಾಹೀರಾತನ್ನು ಹಿಂಪಡೆದಿತ್ತು. ದೇಶದ ಒಬ್ಬ ಮಹತ್ವದ ಎಡಪಂಥೀಯ ನಾಯಕರಾಗಿ ಯೆಚೂರಿ ಗುರುತಿಸಿಕೊಂಡಿದ್ದಾರೆ.

You cannot copy content of this page

Exit mobile version