Friday, July 11, 2025

ಸತ್ಯ | ನ್ಯಾಯ |ಧರ್ಮ

ಕರ್ನಾಟಕ ಮಾಧ್ಯಮ ಅಕಾಡೆಮಿ ಮುಖ್ಯಸ್ಥರಾಗಿ ಹಿರಿಯ ಪತ್ರಕರ್ತೆ ಆಯೇಷಾ ಖಾನಮ್ ಆಯ್ಕೆ

ಕರ್ನಾಟಕ ಮಾಧ್ಯಮ ಅಕಾಡೆಮಿಯ ಅಧ್ಯಕ್ಷೆಯಾಗಿ ಹಿರಿಯ ಪತ್ರಕರ್ತೆ ಆಯೇಷಾ ಖಾನಮ್ ಅವರನ್ನು ನೇಮಕ ಮಾಡಿ ರಾಜ್ಯ ಸರ್ಕಾರ ಬುಧವಾರ ಆದೇಶ ಹೊರಡಿಸಿದೆ.

ಈ ಹಿಂದೆ ಆಯೇಷಾ ದೂರದರ್ಶನದಲ್ಲಿ ದಕ್ಷಿಣ ಭಾರತದ ಮುಖ್ಯ ವರದಿಗಾರರಾಗಿದ್ದರು.

ಹಿರಿಯ ಪತ್ರಕರ್ತರಾದ ಎಂ ಎನ್ ಅಹೋಬಳಪತಿ (ಚಿತ್ರದುರ್ಗ), ಕೆ ನಿಗಜ್ಜ (ಕೊಪ್ಪಳ) ಮತ್ತು ಹಿರಿಯ ಸುದ್ದಿ ಛಾಯಾಗ್ರಾಹಕ ಕೆ ವೆಂಕಟೇಶ್ ಅವರನ್ನು ಅಕಾಡೆಮಿ ಸದಸ್ಯರನ್ನಾಗಿ ಸರ್ಕಾರ ನೇಮಿಸಿದೆ. ಛಾಯಾಚಿತ್ರ ಪತ್ರಕರ್ತರೊಬ್ಬರು ಅಕಾಡೆಮಿಯ ಸದಸ್ಯರಾಗಿ ನಾಮನಿರ್ದೇಶನಗೊಂಡಿರುವುದು ಇದೇ ಮೊದಲು ಎಂದು ಮುಖ್ಯಮಂತ್ರಿ ಕಚೇರಿ ಮೂಲಗಳು ತಿಳಿಸಿವೆ.

Related Articles

ಇತ್ತೀಚಿನ ಸುದ್ದಿಗಳು

You cannot copy content of this page