Monday, July 28, 2025

ಸತ್ಯ | ನ್ಯಾಯ |ಧರ್ಮ

ಹಿರಿಯ ಪತ್ರಕರ್ತ ದೀಪಕ್ ತಿಮ್ಮಯ ಕಾಂಗ್ರೆಸ್ ಸೇರ್ಪಡೆ

ಬೆಂಗಳೂರು, ಏ. 11: ಹಿರಿಯ ಪತ್ರಕರ್ತ ದೀಪಕ್ ತಿಮ್ಮಯ ಅವರನ್ನು ಕೆಪಿಸಿಸಿ ಅಧ್ಯಕ್ಷರು ಹಾಗೂ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಗುರುವಾರ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆ ಮಾಡಿಕೊಂಡರು.

ಸದಾಶಿವನಗರ ನಿವಾಸದಲ್ಲಿ ಗುರುವಾರ ದೀಪಕ್ ತಿಮ್ಮಯ ಅವರಿಗೆ ಕಾಂಗ್ರೆಸ್ ಪಕ್ಷದ ಶಾಲು ಹೊದೆಸಿ, ಹೂಗುಚ್ಛ ನೀಡಿ ಪಕ್ಷಕ್ಕೆ ಬರಮಾಡಿಕೊಂಡ ಶಿವಕುಮಾರ್ ಅವರು ನಂತರ ಮಾಧ್ಯಮಗಳ ಜತೆ ಮಾತನಾಡಿದರು.

“ಹಿರಿಯ ಪತ್ರಕರ್ತರಾದ ದೀಪಕ್ ತಿಮ್ಮಯ ಅವರನ್ನು ಕಾಂಗ್ರೆಸ್ ಪಕ್ಷಕ್ಕೆ ಸಂಬಂಧಿಸಿದಂತೆ ಕೆಪಿಸಿಸಿ ಅಧ್ಯಕ್ಷರ ರಾಜಕೀಯ ಹಾಗೂ ಸಂವಹನ ಕಾರ್ಯದರ್ಶಿಯಾಗಿ ನೇಮಕ ಮಾಡಲಾಗಿದ್ದು, ಅವರಿಗೆ ಕಾಂಗ್ರೆಸ್ ಕಚೇರಿಯಲ್ಲಿ ಕಚೇರಿ ನೀಡಲಾಗುವುದು. ಪಕ್ಷದ ವಿಚಾರವಾಗಿ ಯಾರೇ ನನ್ನನ್ನು ಸಂಪರ್ಕ ಮಾಡಲು ಅವರು ಸಹಕಾರ ನೀಡಲಿದ್ದಾರೆ.

ಮಾಧ್ಯಮ ಕ್ಷೇತ್ರದಲ್ಲಿ ಸುಮಾರು 30-40 ವರ್ಷಗಳ ಅನುಭವವಿರುವ ದೀಪಕ್ ತಿಮ್ಮಯ ಅವರು ತಮ್ಮದೇ ಆದ ಸಂಸ್ಥೆ ಮೂಲಕ ಮಕ್ಕಳನ್ನು ನಾಯಕರನ್ನಾಗಿ ರೂಪಿಸುವ ಕೆಲಸ ಮಾಡಿಕೊಂಡು ಬಂದಿದ್ದಾರೆ. ನಾಯಕರನ್ನು ಸೃಷ್ಟಿಸುವವನು ನಾಯಕನೇ ಹೊರತು ಹಿಂಬಾಲಕರನ್ನು ಸೃಷ್ಟಿಸುವವನು ಅಲ್ಲ ಎಂಬಂತೆ ಕೆಲಸ ಮಾಡುತ್ತಿದ್ದಾರೆ. ಕಳೆದ ಕೆಲವು ವರ್ಷಗಳಿಂದ ಕಾಂಗ್ರೆಸ್ ಪಕ್ಷದ ತತ್ವ, ಸಿದ್ಧಾಂತ, ವಿಚಾರವಾಗಿ ಅವರು ನನಗೆ ಅನೇಕ ಉತ್ತಮ ಸಲಹೆಗಳನ್ನು ನೀಡಿದ್ದಾರೆ. ಹೀಗಾಗಿ ಅವರಿಗೆ ಕಾಂಗ್ರೆಸ್ ಪಕ್ಷದ ಭಾಗವಾಗುವಂತೆ ಮನವಿ ಮಾಡಿದ್ದೆ. ಅದನ್ನು ಒಪ್ಪಿ ಅವರು ಇಂದು ಪಕ್ಷಕ್ಕೆ ಸೇರ್ಪಡೆ ಆಗಿದ್ದು, ಈ ಜವಾಬ್ದಾರಿ ತೆಗೆದುಕೊಳ್ಳುತ್ತಿದ್ದಾರೆ.” ಎಂದು ಅವರು ಈ ಸಂದರ್ಭದಲ್ಲಿ ತಿಳಿಸಿದರು.

Related Articles

ಇತ್ತೀಚಿನ ಸುದ್ದಿಗಳು

You cannot copy content of this page