Tuesday, January 27, 2026

ಸತ್ಯ | ನ್ಯಾಯ |ಧರ್ಮ

ಹಿರಿಯ ನಾಯಕ ಡಿ.ಬಿ.ಚಂದ್ರೇಗೌಡ ನಿಧನ

ಹಲವು ದಿನಗಳ ಅನಾರೋಗ್ಯದಿಂದ ಬಳಲುತ್ತಿದ್ದ ಮಾಜಿ ಸಚಿವ, ಬಿಜೆಪಿ ನಾಯಕ ಡಿ.ಬಿ.ಚಂದ್ರೇಗೌಡ (87) ಇಂದು ಮೂಡಿಗೆರೆ ತಾಲೂಕಿನ ದಾರದಹಳ್ಳಿಯ ನಿವಾಸದಲ್ಲಿ ಕೊನೆಯುಸಿರೆಳೆದಿದ್ದಾರೆ.


ಜನತಾದಳದಿಂದ ತಮ್ಮ ರಾಜಕೀಯ ಜೀವನ ಶುರು ಮಾಡಿದ್ದ ಡಿ.ಬಿ.ಚಂದ್ರೇಗೌಡರು ರಾಜ್ಯದಲ್ಲಿ 3 ಬಾರಿ ಶಾಸಕರಾಗಿ, ಮೂರು ಬಾರಿ ಸಂಸದರಾಗಿ, ರಾಜ್ಯ ಕಾನೂನು ಸಚಿವರಾಗಿ, ರಾಜ್ಯಸಭಾ ಸದಸ್ಯ ಹೀಗೆ ನಾನಾ ಹುದ್ದೆಗಳನ್ನು ನಿಭಾಯಿಸಿ ಬಂದವರಾಗಿದ್ದರು.


ತಮ್ಮ ರಾಜಕೀಯ ಜೀವನದ ಕಡೆಯ ದಿನಗಳಲ್ಲಿ ಕಾಂಗ್ರೆಸ್ ಪಕ್ಷ ತೊರೆದು ಬಿಜೆಪಿ ಪಕ್ಷದಿಂದ ಗುರುತಿಸಿಕೊಂಡಿದ್ದರು. ಆದರೆ ಬಿಜೆಪಿ ಪಕ್ಷದಿಂದ ಯಾವುದೇ ಹುದ್ದೆ ಪಡೆದಿರಲಿಲ್ಲ.

Related Articles

ಇತ್ತೀಚಿನ ಸುದ್ದಿಗಳು

You cannot copy content of this page