Home ಟ್ರೆಂಡಿಂಗ್ ಸುದ್ದಿ/ವೈರಲ್‌ ಸುದ್ದಿ ಸೆ.14 ರಂದು ಹಿಂದಿ ದಿವಸ್‌ ಆಚರಣೆಗೆ ಜೆಡಿಎಸ್‌ ವಿರೋಧ

ಸೆ.14 ರಂದು ಹಿಂದಿ ದಿವಸ್‌ ಆಚರಣೆಗೆ ಜೆಡಿಎಸ್‌ ವಿರೋಧ

0
the news minut

ರಾಜ್ಯ ಸರ್ಕಾರವು ಸೆಪ್ಟಂಬರ್‌ 14 ರಂದು ಆಚರಿಸಲು ಹೊರಟಿರುವ ಹಿಂದಿ ದಿವಸ್‌ ಗೆ ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ ಕುಮಾರಸ್ವಾಮಿ ಅವರು ಈಗಾಗಲೇ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಪತ್ರ ಬರೆದು ವಿರೋಧಿಸಿದ್ದಾರೆ.

ಈ ಕುರಿತು ಪತ್ರದಲ್ಲಿ ಅವರು ಭಾರತವು ಸಾವಿರಾರು ಭಾಷೆ ಹಾಗೂ ಉಪ ಭಾಷೆಗಳನ್ನು ಒಳಗೊಂಡ, 560 ಕ್ಕೂ ಹೆಚ್ಚು ಸಂಸ್ಥಾನಗಳು ಒಪ್ಪಿ ಸೇರಿದ ಮತ್ತು ಸಾಮಾಜಿಕ, ಸಾಂಸ್ಕೃತಿಕವಾಗಿ ಬಿನ್ನ ಆಚರಣೆಗಳನ್ನು ಹೊಂದಿರುವ ಒಂದು ಮಹಾನ್‌ ಒಕ್ಕೂಟವಾಗಿದೆ. ಇಂತಹ ನಾಡಿನಲ್ಲಿ ಕೇವಲ ಒಂದು ಭಾಷೆಯನ್ನು ಮಾತ್ರವೇ ಮೆರೆಸುವುದು ನಿಜಕ್ಕೂ ಜನತೆಗೆ ಎಸಗುವ ಪರಮ ಅನ್ಯಾಯವಾಗಿದೆ.

ಸೆಪ್ಟೆಂಬರ್‌ 14 ರಂದು ಭಾರತ ಒಕ್ಕೂಟ ಸರ್ಕಾರದ ಪ್ರಾಯೋಜಿತ ಕಾರ್ಯಕ್ರಮವಾದ “ಹಿಂದಿ ದಿವಸ”ವನ್ನು ಕರ್ನಾಟಕದಲ್ಲಿ ಒತ್ತಾಯಪೂರ್ವಕವಾಗಿ ಆಚರಿಸುವುದು ರಾಜ್ಯ ಸರ್ಕಾರ ಕನ್ನಡಿಗರಿಗೆ ಮಾಡುವ ಅನ್ಯಾಯವಾಗಿದೆ. ಕರ್ನಾಟಕ ಸರ್ಕಾರದ ವತಿಯಿಂದ, ನಮ್ಮ ರಾಜ್ಯದ ಜನತೆಯ ತೆರಿಗೆ ಹಣದಲ್ಲಿ ಯಾವುದೇ ಕಾರಣಕ್ಕೂ ರಾಜ್ಯ ಸರ್ಕಾರ ಹಿಂದಿ ದಿವಸ ಆಚರಣೆ ಮಾಡಬಾರದೆಂದು ಹೆಚ್.ಡಿ ಕುಮಾರಸ್ವಾಮಿ ಯವರು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಪತ್ರದ ಮೂಲಕ ಆಗ್ರಹಿಸಿದ್ದಾರೆ.

You cannot copy content of this page

Exit mobile version