ಬೆಂಗಳೂರು: ಅಕ್ರಮ ಆಸ್ತಿ ಸಂಪಾದನೆ ಆರೋಪಕ್ಕೆ ಸಂಬಂಧಿಸಿದಂತೆ ಶೃಂಗೇರಿ ಕ್ಷೇತ್ರದ ಕಾಂಗ್ರೆಸ್ ಶಾಸಕ ರಾಜೇಗೌಡ ಅವರ ವಿರುದ್ಧ ತನಿಖೆ ನಡೆಸುವಂತೆ ನ್ಯಾಯಾಲಯವು ಆದೇಶ ಹೊರಡಿಸಿದೆ.
ಬಿಜೆಪಿ ನಾಯಕರಾದ ದಿನೇಶ್ ಹೊಸೂರು ಅವರು ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಶಾಸಕ ರಾಜೇಗೌಡ ಅವರ ವಿರುದ್ಧ ಈ ತನಿಖೆಗೆ ಆದೇಶಿಸಿದೆ.
ಪ್ರಥಮ ವರ್ತಮಾನ ವರದಿ (ಎಫ್‌ಐಆರ್) ದಾಖಲಿಸಿ ತನಿಖೆ ಮುಂದುವರಿಸುವಂತೆ ನ್ಯಾಯಾಲಯವು ನಿರ್ದೇಶನ ನೀಡಿದೆ.
ಶಾಸಕರ ಪತ್ನಿ ಮತ್ತು ಮಗನ ವಿರುದ್ಧವೂ ಪ್ರಕರಣ ದಾಖಲಿಸಿ ತನಿಖೆ ಕೈಗೊಳ್ಳಬೇಕು. 60 ದಿನಗಳ ಅವಧಿಯೊಳಗೆ ತನಿಖಾ ವರದಿಯನ್ನು ಸಲ್ಲಿಸುವಂತೆ ಚಿಕ್ಕಮಗಳೂರು ಲೋಕಾಯುಕ್ತ ಅಧಿಕಾರಿಗಳಿಗೆ ನ್ಯಾಯಾಲಯವು ಸೂಚಿಸಿದೆ.